ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು “ಸಖಿ” ಕಾರ್ಯಕ್ರಮವನ್ನು ಫೋರ್ಟಿಸ್ ಆಸ್ಪತ್ರೆ ಪ್ರಾರಂಭಿಸಿದೆ.
ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಈ ಕುರಿತು ಮಾತನಾಡಿದ ಅವರು, ಕ್ಯಾನ್ಸರ್ ಎಂಬುದು ದೈಹಿಕ ಕಾಯಿಲೆಯ ಜೊತೆಗೆ ಅದೊಂದು ಮಾನಸಿಕ ಕಾಯಿಲೆಯೂ ಹೌದು. ಕ್ಯಾನ್ಸರ್‌ನಿಂದ ಬದುಕುಳಿದ ಬಳಿಕ ಅವರ ಜೀವನ ಆರೈಕೆ ಅತಿ ಮುಖ್ಯವಾದದ್ದು. ಅವರನ್ನು ಮಾನಸಿಕವಾಗಿ, ಭಾವನಾತ್ಮಕವಾಗಿ ಹೊರತರುವುದು ಹೆಚ್ಚು ಅಗತ್ಯ. ಅದಕ್ಕಾಗಿಯೇ ಫೋರ್ಟಿಸ್ ಆಸ್ಪತ್ರೆಯಲ್ಲಿ “ಸಖಿ” ಹೆಸರಿನಲ್ಲಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಯ ಬಗ್ಗೆ ಗಮನ ಹರಿಸುವುದು ಹಾಗೂ ಇಡೀ ಸಮಾಜದಲ್ಲಿ ಅವರು ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು ಎಂಬುದರ ಬಗ್ಗೆ ಮಾನಸಿಕವಾಗಿ ಅವರಿಗೆ ಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಅಧಿಕ ಮಂದಿ ಪಾಲ್ಗೊಂಡಿದಿದ್ದು ವಿಶೇಷ.
ಕ್ಯಾನ್ಸರ್‌ನಿಂದ ಬದುಕುಳಿದ ಪ್ರಭಾ ಉನ್ನಿಕೃಷ್ಣನ್ ಮಾತನಾಡಿ, ಕ್ಯಾನ್ಸರ್‌ನಿಂದ ಬದುಕುಳಿಯುವುದು ಕೇವಲ ದೈಹಿಕ ಸವಾಲುಗಳನ್ನು ಜಯಿಸುವುದು ಮಾತ್ರವಲ್ಲ, ಅದರೊಂದಿಗೆ ಬರುವ ಭಾವನಾತ್ಮಕ ಮತ್ತು ಮಾನಸಿಕ ಅಡೆತಡೆಗಳನ್ನು ಎದುರಿಸುವ ಶಕ್ತಿಯನ್ನು ಕಂಡುಕೊಳ್ಳುವುದು. ಈ ಕಾರ್ಯಕ್ರಮವು ನನಗೆ ಮತ್ತು ಇತರ ಅನೇಕರಿಗೆ ಭರವಸೆಯ ದಾರಿದೀಪವಾಗಿದೆ, ನಾವು ನಮ್ಮ ಕಥೆಗಳನ್ನು ಹಂಚಿಕೊಳ್ಳಲು, ಒಬ್ಬರಿಗೊಬ್ಬರು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇದೊಂದು ಉತ್ತಮ ಸ್ಥಳವಾಗಿದೆ. ಇದರ ಭಾಗವಾಗಲು ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.
ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಮಾತನಾಡಿ, “ಫೋರ್ಟಿಸ್‌ನಲ್ಲಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಷ್ಟೇ ಆಸ್ಪತ್ರೆಗಳ ಕೆಲಸವಲ್ಲ. ಚಿಕಿತ್ಸೆಯ ಬಳಿಕ ಅವರ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಸ್ಪತ್ರೆಗಳು ನೆರವಾಗಬೇಕು. ಹೀಗಾಗಿ ನಮ್ಮ ಆಸ್ಪತ್ರೆಯು ಕ್ಯಾನ್ಸರ್ ಪೀಡಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಸಖಿ ಕಾರ್ಯಕ್ರಮದ ಮೂಲಕ ನಮ್ಮ ಬದ್ಧತೆಯನ್ನು ತೋರಿಸುತ್ತಿದೆ ಎಂದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…