ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಕ್ಕಳ ಕನಸು ಪೂರ್ಣಗೊಳಿಸುವ ಯತ್ನ: ಪೊಲೀಸ್ ಸಮವಸ್ತ್ರ ಧರಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿದ ಮಕ್ಕಳು: 1 ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಗಳಾಗಿ ಕಾರ್ಯ ನಿರ್ವಹಣೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್‌, ಜೀವನ್‌ ಕುಮಾರ್‌, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್‌ ಸಮವಸ್ತ್ರ ಧರಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿ 1 ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

ಪೊಲೀಸ್ ಆಯುಕ್ತರ ಜೊತೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಅನಾವರಣಗೊಳಿಸಿದರು.

ಇದು ವಿಶ್ವ ಕ್ಯಾನ್ಸರ್ ದಿನವಾದ ಮಂಗಳವಾರ(ಫೆ.4) ಕಿಡ್ಸ್ ವಾರಿಯರ್ಸ್ (ಪೀಡಿಯಾಟ್ರಿಕ್ ಕ್ಯಾನ್ಸರ್ ಮಕ್ಕಳ) ಕನಸುಗಳನ್ನು ನನಸಾಗಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಆಯೋಜಿಸಿದ ಮಾನವೀಯ ಕಾರ್ಯಕ್ರಮವಾಗಿದೆ.

ಕನಸುಗಳನ್ನು ನಿಜವಾಗಿಸಲು ಒಂದು ಹೆಜ್ಜೆ! ವಿಶ್ವ ಕ್ಯಾನ್ಸರ್ ದಿನದಂದು, ಬೆಂಗಳೂರು ನಗರ ಪೊಲೀಸ್ ಇಲಾಖೆಯು ಪರಿಹಾರ್ ಮತ್ತು ಕಿಡ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲೊಜಿ ಸಹಯೋಗದಲ್ಲಿ ಕಿಡ್ಸ್‌ ವಾರಿಯರ್ಸ್‌ (ಪೀಡಿಯಾಟ್ರಿಕ್ ಕ್ಯಾನ್ಸರ್‌ ಮಕ್ಕಳ) ಕನಸುಗಳ ಪೂರ್ಣಗೊಳಿಸಲು ಗೌರವಾನುಭವಿಗಳಾಗಿದ್ದೇವೆ ಎಂದು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ವಿಶ್ವಾಸ್, ಜೀವನ್ ಕುಮಾರ್, ದಾನಮ್ಮ ಮತ್ತು ದಿವ್ಯಾಶ್ರೀ (12 ರಿಂದ 14 ವರ್ಷದ ಮಕ್ಕಳು) ಅವರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ “ಒಂದು ದಿನದ ಪೊಲೀಸ್ ಅಧಿಕಾರಿ” ಆಗಿ ಸೇವೆ ಸಲ್ಲಿಸುವ ಅಪರೂಪದ ಅನುಭವ ಪಡೆದಿದ್ದಾರೆ. ಈ ಹೃದಯಸ್ಪರ್ಶಿ ಕಾರ್ಯಕ್ರಮವು ಈ ಧೈರ್ಯಶಾಲಿ ಮಕ್ಕಳಿಗೆ ಸ್ಫೂರ್ತಿ ನೀಡಲು ಮತ್ತು ಸಂತೋಷ ತರಲು ಉದ್ದೇಶಿತವಾಗಿದೆ. ಇದರೊಂದಿಗೆ ಟ್ರಾಫಿಕ್ ಪೊಲೀಸ್ ಮ್ಯೂಸಿಯಂ ಭೇಟಿಯ ಮೂಲಕ ರಸ್ತೆ ಸುರಕ್ಷತೆ ಮತ್ತು ಜನರ ಪ್ರಾಣ ಉಳಿಸಲು ಬೆಂಗಳೂರು ಪೊಲೀಸರು ಹೇಗೆ ಕೆಲಸ ನಿರ್ವಹಿಸುತ್ತಾರೆ ಎಂಬುವುದನ್ನು ಅರ್ಥೈಸುವುದು ಈ ಕಾರ್ಯದ ಪ್ರಮುಖ ಭಾಗವಾಗಿತ್ತು ಎಂದು ಹೇಳಿದ್ದಾರೆ.

ನಂತರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಇವರು ಸಹ ಭಾಗವಹಿಸಿದ್ದರು.

ಗಮನ ಬೇರೆಡೆಗೆ ಸೆಳೆಯುವ ತಂತ್ರದ ಮೂಲಕ ಚಿನ್ನಾಭರಣ ಮತ್ತು ನಗದು ಕಳ್ಳತನದಲ್ಲಿ ತೊಡಗಿದ್ದ ಇಬ್ಬರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಾಹನದ ಟೈರ್ ಪಂಚರ್ ಆಗಿದೆ ಎಂದು ಸುಳ್ಳು ಎಚ್ಚರಿಕೆ ನೀಡಿ ಸಂತ್ರಸ್ತರನ್ನು ವಂಚಿಸಿ, ಈ ಸಂದರ್ಭವನ್ನು ಬಳಸಿಕೊಂಡು ಸಂತ್ರಸ್ತರ ವಾಹನವನ್ನು ಒಡೆದು ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಸುಮಾರು ₹12 ಲಕ್ಷ ಮೌಲ್ಯದ 101 ಗ್ರಾಂ ಚಿನ್ನಾಭರಣ ಮತ್ತು ₹4.50 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ನಗರ ಪೊಲೀಸರು ಇಂತಹ ವಂಚನೆಗಳ ವಿರುದ್ಧ ಜಾಗರೂಕರಾಗಿರಲು ಮತ್ತು ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣವೇ ವರದಿ ಮಾಡಲು ನಾಗರಿಕರಿಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಮನೆಗೆಲಸದ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಕಳವು ಪ್ರಕರಣದಲ್ಲಿ ಸುಮಾರು ₹22.5 ಲಕ್ಷ ಮೌಲ್ಯದ 273 ಗ್ರಾಂ ಚಿನ್ನಾಭರಣ ಮತ್ತು ₹75,200 ನಗದನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಮನೆಗೆಲಸದವರನ್ನು ನೇಮಿಸಿಕೊಳ್ಳುವಾಗ ಎಚ್ಚರ ವಹಿಸಬೇಕೆಂದು ಬೆಂಗಳೂರು ನಗರ ಪೊಲೀಸರು ನಾಗರಿಕರಿಗೆ ಮನವಿ ಮಾಡಿದ್ದು, ಸಂಪೂರ್ಣ ಹಿನ್ನೆಲೆ ಪರಿಶೀಲನೆ ಮೂಲಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಿದ್ದಾರೆ ಎಂದರು.

ಮಹದೇವಪುರ ಪೊಲೀಸರು ಬೆಂಗಳೂರಿನಾದ್ಯಂತ ನಡೆದ ಅನೇಕ ಮೊಬೈಲ್ ದೋಚಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಒಟ್ಟು ₹ 30,40,000 ಮೌಲ್ಯದ 93 ಮೊಬೈಲ್‌ಗಳು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ರಸ್ತೆಯಲ್ಲಿ ಎಚ್ಚರದಿಂದಿರಿ ಮತ್ತು ನಿಮ್ಮ ವಸ್ತುಗಳನ್ನು ಸುರಕ್ಷಿತವಾಗಿಡಿ ಎಂದು ಹೇಳಿದರು.

ಬಾಗಲಗುಂಟೆ ಪೊಲೀಸ್ ಠಾಣೆಯವರು ಹಲವಾರು ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು ₹4 ಲಕ್ಷ ಮೌಲ್ಯದ 8 ಕಳ್ಳತನದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನವನ್ನು ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ನಾಗರಿಕರು ಪಾರ್ಕಿಂಗ್ ಮಾಡುವಾಗ ತಮ್ಮ ವಾಹನಗಳನ್ನು ಸುರಕ್ಷಿತವಾಗಿ ಲಾಕ್ ಮಾಡಬೇಕೆಂದು ವಿನಂತಿಸುತ್ತೇವೆ ಎಂದು ತಿಳಿಸಿದರು.

ಮಡಿವಾಳ ಪೊಲೀಸ್ ಠಾಣೆ ಅಧಿಕಾರಿಗಳಿಂದ ಅಂತರರಾಜ್ಯ ಕಳ್ಳನ ಬಂಧನ! ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಹಾಗೂ ತೆಲಂಗಾಣ ಸೇರಿದಂತೆ 150ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಯನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದು ಮನೆ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಒಟ್ಟು ₹12.25 ಲಕ್ಷ ಮೌಲ್ಯದ 181 ಗ್ರಾಂ ಚಿನ್ನ ಮತ್ತು 333 ಗ್ರಾಂ ಬೆಳ್ಳಿಯನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮತ್ತು ಸಹಚರನು ತಪ್ಪೊಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

14 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago