ಕ್ಯಾಪ್ಟನ್ ಕೂಲ್ ಗೆ 42ನೇ ಹುಟ್ಟು ಹಬ್ಬದ ಸಂಭ್ರಮ

ಜಾರ್ಖಂಡ್ ನ ಸಣ್ಣ ಪಟ್ಟಣವಾದ ರಾಂಚಿಯಿಂದ ಬಂದು ಐಸಿಸಿ ಆಯೋಜಿಸುವ ಎಲ್ಲಾ ಮಾದರಿಯ ಟ್ರೋಫಿ ಗೆದ್ದು, ಕೋಟ್ಯಂತರ ಅಭಿಮಾನಿಗಳ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಪಡೆದು , ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ಇಡೀ ಕ್ರಿಕೆಟ್ ಜಗತ್ತು ಸಾಕ್ಷಿಯಾಗಿದೆ.

ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ನಂತರ ಅತ್ಯಂತ ಸಂಕಷ್ಟದಲ್ಲಿದ್ದ ಭಾರತ ತಂಡದ ನಾಯಕತ್ವ ವಹಿಸಿಕೊಂಡ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಅವರ ಆರಂಭಿಕ ದಿನಗಳು ಉತ್ತಮವಾಗಿರಲಿಲ್ಲ.

ಐಸಿಸಿ ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದ ಚೊಚ್ಚಲ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ ಖ್ಯಾತಿ ಧೋನಿ ಅವರದು, ನಂತರ ತವರಿನಲ್ಲಿ ನಡೆದ 2011 ಐವತ್ತು ಓವರ್ ಗಳ ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಗೌತಮ್ ಗಂಭೀರ್ (97) ಮತ್ತು ನಾಯಕನಾಗಿ ಧೋನಿ (91) ರನ್ ಗಳಿಸುವ ಮೂಲಕ 28 ವಷ೯ಗಳ ಬಳಿಕ ಭಾರತಕ್ಕೆ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2013 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ ಜಯಗಳಿಸಿ ಭಾರತಕ್ಕೆ ಟ್ರೋಫಿ ದೊರಕಿಸಿಕೊಟ್ಟರು. ನಾಯಕನಾಗಿ, ವಿಕೆಟ್ ಕೀಪರ್ ಆಗಿ, ಮ್ಯಾಚ್ ಫಿನಿಶರ್ ಹಾಗೂ ಮೆಂಟರ್ ಆಗಿರುವ ಧೋನಿ ಲಕ್ಷಾಂತರ ಯುವ ಆಟಗಾರರಿಗೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಸ್ಪೂರ್ತಿಯಾಗಿದ್ದಾರೆ.

2008 ರಿಂದ ಆರಂಭವಾಗಿರುವ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ ನಾಯಕನಾಗಿ 200 ಪಂದ್ಯಗಳು ಪೂರೈಸಿ ದಾಖಲೆ ಬರೆದಿದ್ದಾರೆ, 14 ಆವೃತ್ತಿಯ ಐಪಿಎಲ್ ನಲ್ಲಿ 11 ಬಾರಿ ಫೈನಲ್ ಪಂದ್ಯದಲ್ಲಿ ಆಡಿದ್ದು 5 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ಯಾಪ್ಟನ್ ಕೂಲ್ ಖ್ಯಾತಿ ಧೋನಿ ಅವರು ಪ್ಯಾರಾ ಮಿಲಿಟರಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ, ಭಾರತ ಸರ್ಕಾರದಿಂದ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ತಮಿಳುನಾಡು ಸಿಎಂ ಸ್ಟಾಲಿನ್, ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಹಭ೯ಜನ್ ಸಿಂಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವಾರು ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಜನ್ಮದಿನಾಚರಣೆಯ ಶುಭಾಶಯ ಕೋರಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago