ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್ ಇನ್ನಿಲ್ಲ

ವ್ಯಾಟಿಕನ್ ಸಿಟಿ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್‌ (88) ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.

ಅವರ ಇಡೀ ಜೀವನವು ಭಗವಂತನ ಮತ್ತು ಅವರ ಚರ್ಚ್‌ ಸೇವೆಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ಜಗತ್ತಿನಾದ್ಯಂತ 1.4 ಶತಕೋಟಿ ಜನರಿಗೆ ಆಧ್ಯಾತ್ಮಿಕ ಧರ್ಮಗುರುವಾಗಿದ್ದರು. 2013ರಿಂದ ಪೋಪ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕಳೆದ ವರ್ಷ ಪೋಪ್​​ರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ

ಕಳೆದ ವರ್ಷ ಜೂನ್‌ನಲ್ಲಿ, ಪ್ರಧಾನಿಯವರು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಹೋಗಿದ್ದಾಗ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಭಾರತಕ್ಕೆ ಬನ್ನಿ ಎಂದು ಪೋಪ್ ಅವರಿಗೆ ಮೋದಿ ಆಹ್ವಾನ ನೀಡಿದ್ದರು. ಪೋಪ್ ಅವರೊಂದಿಗೆ ಪ್ರಧಾನಿ ಮೋದಿ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದರು. ಆ ಸಮಯದಲ್ಲಿ ವಿಶ್ವದ ಅತಿದೊಡ್ಡ ಬಿಕ್ಕಟ್ಟಾದ ಕೊರೊನಾ ಬಗ್ಗೆಯೂ ಉಭಯರೂ ಸುದೀರ್ಘ ಮಾತುಕತೆ ನಡೆಸಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

8 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

13 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

16 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago