ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಶಾಲಾ ಆವರಣದಲ್ಲಿ ನಿರ್ಮಿಸಿರುವ ಬಾಕ್ಸಿಂಗ್ ರಿಂಗ್, ಕುಸ್ತಿ ಅಂಕಣ, ಜೂಡೋ ತರಬೇತಿ ವ್ಯವಸ್ಥೆ, ಕಬ್ಬಡಿ ಅಂಕಣ, ಶಟಲ್ ಬ್ಯಾಡ್ಮಿಂಟನ್ ಅಂಕಣ, ಸ್ಕೇಟಿಂಗ್ ಅಂಕಣ ಹಾಗೂ ಪಂಚಿಂಗ್ ಬ್ಯಾಗ್ ಸೇರಿದಂತೆ ವಿವಿಧ ಕ್ರೀಡಾ ಸೌಲಭ್ಯಗಳನ್ನು ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ವಿದ್ಯಾರ್ಥಿಗಳು ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯ ಮೂಲಕ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ, ದೈಹಿಕ ಸಾಮರ್ಥ್ಯ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಹೇಳಿದರು.

ಒಂದೇ ಆವರಣದಲ್ಲಿ ಹಲವು ಕ್ರೀಡೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಅನುಕೂಲವಾಗಲಿದೆ. ವಿಶೇಷವಾಗಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಸ್ಕೇಟಿಂಗ್ ಹಾಗೂ ಬ್ಯಾಡ್ಮಿಂಟನ್‌ನಲ್ಲಿ ಆಸಕ್ತಿ ಹೊಂದಿರುವವರಿಗೆ ಇದು ಉತ್ತಮ ವೇದಿಕೆಯಾಗಲಿದೆ.

ಶಾಲಾ ವಿದ್ಯಾರ್ಥಿಗಳಷ್ಟೇ ಅಲ್ಲದೆ, ದೊಡ್ಡಬಳ್ಳಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕ್ರೀಡಾಸಕ್ತ ವಿದ್ಯಾರ್ಥಿಗಳಿಗೂ ಈ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶವನ್ನು ಶಾಲಾ ಆಡಳಿತ ಹೊಂದಿದೆ.

ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳನ್ನು ರೂಪಿಸುವ ಗುರಿಯನ್ನು ನ್ಯಾಷನಲ್ ಪ್ರೈಡ್ ಶಾಲೆ ಹೊಂದಿದೆ. ಶಾಲೆಯ ಈ ಪ್ರಯತ್ನಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

2 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

4 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

7 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

8 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

15 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

15 hours ago