ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾಲ್ಲೂಕುವಾರು ನಡೆಸಲಾಗುತ್ತಿದೆ.

7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ಫೆಬ್ರುವರಿ 06 ರಂದು ರಂದು ನೆಲಮಂಗಲ ತಾಲ್ಲೂಕಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಫೆಬ್ರವರಿ 07 ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣ, ಫೆಬ್ರವರಿ 10 ರಂದು ದೊಡ್ಡಬಳ್ಳಾಪುರದ ‘ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ, ಫೆಬ್ರವರಿ 11ರಂದು ದೇವನಹಳ್ಳಿಯ ಟೌನ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ರಂದು ನಡೆಸಲಾಗುತ್ತದೆ.

ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.

8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು 17 ವರ್ಷದೊಳಗಿರಬೇಕು. ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.

ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 17 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 18 ರಂದು ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಮೊ.ಸಂ.9980590960/9632778567 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

9 minutes ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

2 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

3 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

18 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

22 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

22 hours ago