ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾಲ್ಲೂಕುವಾರು ನಡೆಸಲಾಗುತ್ತಿದೆ.
7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ಫೆಬ್ರುವರಿ 06 ರಂದು ರಂದು ನೆಲಮಂಗಲ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಫೆಬ್ರವರಿ 07 ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣ, ಫೆಬ್ರವರಿ 10 ರಂದು ದೊಡ್ಡಬಳ್ಳಾಪುರದ ‘ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ, ಫೆಬ್ರವರಿ 11ರಂದು ದೇವನಹಳ್ಳಿಯ ಟೌನ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ರಂದು ನಡೆಸಲಾಗುತ್ತದೆ.
ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.
8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು 17 ವರ್ಷದೊಳಗಿರಬೇಕು. ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.
ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 17 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 18 ರಂದು ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಮೊ.ಸಂ.9980590960/9632778567 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…