ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ- ಸಿಎಂ ಸಿದ್ದರಾಮಯ್ಯ

ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಹಗಲಿರುಳು ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ 1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ ಎಂದರು.

ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು, 4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉತ್ತಮ ಕ್ರೀಡಾಪಟುಗಳನ್ನು ರಾಜ್ಯಕ್ಕೆ ನೀಡುವ ತರಬೇತುದಾರರಿಗೆ ಒಟ್ಟು 9 ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತಿದ್ದು, 3 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ ಎಂದರು.

ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕರನ್ನು ಗುರುತಿಸಿ ಒಟ್ಟು 15 ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಲಾಗಿದ್ದು, ₹2 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಖಾಸಗಿ ಕ್ಷೇತ್ರದ ಸಂಸ್ಥಗಳನ್ನು ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿದೆ ಎಂದರು.

ಕರ್ನಾಟಕದ ಕ್ರೀಡಾಪಟುಗಳಿಗೆ ಗೆಲ್ಲುವ ಸಾಧ್ಯತೆಗಳಿವೆ, ಪ್ರಯತ್ನ ಮಾಡಬೇಕಷ್ಟೆ. 2028 ರಲ್ಲಿ ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳಲಿರುವ 60 ಜನರನ್ನು ಗುರುತಿಸಲಾಗಿದ್ದು, ಪ್ರತಿ ವರ್ಷ 10 ಲಕ್ಷ ರೂ. ಗಳನ್ನು ತರಬೇತಿಯ ಅವಧಿಯಲ್ಲಿಯೇ ನೀಡಲಾಗುತ್ತದೆ ಎಂದು ಹೇಳಿದರು.

ಕ್ರೀಡಾಪಟುಗಳು ಯಾವುದಾದರೂ ಒಂದು ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಸಂಪೂರ್ಣ ಏಕಾಗ್ರತೆ, ಗುರಿಯಿಟ್ಟುಕೊಂಡು ಸಾಧನೆ ಮಾಡಬೇಕು ಎಂದು ತಿಳಿಸಿದರು.

ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ. ಒಲಂಪಿಕ್ಸ್ ಹಾಗೂ ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಗೆದ್ದವರಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಕರ್ನಾಟಕ ಉತ್ತಮ ಕ್ರೀಡಾಪಟುಗಳನ್ನು ಈವರೆಗೆ ರೂಪಿಸಿದೆ. ಹಾಕಿಯಂತಹ ಕ್ರೀಡೆಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. ಅಥ್ಲೆಟಿಕ್ಸ್ ನಲ್ಲಿಯೂ ಸಾಧನೆ ಮಾಡಬೇಕು ಎಂದರು.

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು. ಅರ್ಜುನನಿಗಿಂತ ಮೀರಿ ಬಿಲ್ಲುವಿದ್ಯೆಯಲ್ಲಿ ಪರಿಣಿತಿ ಸಾಧಿಸಿದ್ದರಿಂದ ಅವನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ದ್ರೋಣಾಚಾರ್ಯರು ಪಡೆಯುತ್ತಾರೆ. ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಏಕಲವ್ಯ ಪ್ರಶಸ್ತಿ ಪಡೆದವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸುತ್ತೇನೆ. ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೂ ಸ್ಪೂರ್ತಿಯಾಗಲಿ ಎಂದು ಹೇಳಿದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

6 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

8 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

11 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

11 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

18 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

18 hours ago