ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ ಅಂಗವಾಗಿ ಜಾಗೃತಿ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮ ನಡೆಯಿತು.
ನ್ಯೂ ಹಾರಿಜನ್ ಕಾಲೇಜು ಹಾಗೂ 6ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ವಿದ್ಯಾರ್ಥಿಗಳ ಸಹಯೋಗದಲ್ಲಿ ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ, ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪಂಚಾಯಿತಿ ಹಾಗೂ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷಯರೋಗದ ಕುರಿತು ಜಾಗೃತಿ ಮೂಡಿಸಲಾಯಿತು.
ಅಭಿಯಾನದ ವೇಳೆ ಎನ್‌ಸಿಸಿ ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ಕ್ಷಯರೋಗದ ಲಕ್ಷಣಗಳು ಕಂಡುಬರುವ ವ್ಯಕ್ತಿಗಳನ್ನು ಗುರುತಿಸಿ, ತಪಾಸಣೆಗೆ ಒಳಪಡಿಸುವ ಕಾರ್ಯ ನಡೆಸಿದರು.
ಸಾರ್ವಜನಿಕರಲ್ಲಿ ಕ್ಷಯರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವ ಕುರಿತು ಜಾಗೃತಿ ಮೂಡಿಸಲಾಯಿತು.
ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದ ಎಲ್ಲಾ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು ಸೇರಿದಂತೆ ಸುಮಾರು 100 ಮಂದಿಗೆ ಎಕ್ಸ್‌ರೇ ಮಾಡಿಸುವ ಮೂಲಕ ಕ್ಷಯರೋಗ ತಪಾಸಣೆ ನಡೆಸಲಾಯಿತು.
ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ರೋಗ ಹರಡುವುದನ್ನು ತಡೆಗಟ್ಟಬಹುದು. ಸಾರ್ವಜನಿಕರು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶಾರದಾ, ವೈದ್ಯಾಧಿಕಾರಿಗಳಾದ ಡಾ. ಮಂಜುವಾಣಿ, ಡಾ. ಪವನ್ ಕುಮಾರ್, ಎನ್‌ಸಿಸಿ ವಿಭಾಗದ ಬಿಎಚ್‌ಎಂ ಹರಭಜನ್ ಸಿಂಗ್, ಎನ್‌ಸಿಸಿ ಅಧಿಕಾರಿ ನಂದಿನಿ ಟಿ, ರೂಪ, ಕಿರಣ್, ಆನಂದ ಎಚ್.ಎಂ., ಪ್ರಭಾಕರ್ ಗೌಡ, ರೇಣುಕಪ್ಪ, ಯುವರಾಜ್ ಆಡಿನ್ ಸೇರಿದಂತೆ ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…