ಕ್ಷಯ ಮುಕ್ತ ಭಾರತ ಅಭಿಯಾನ: ಬಾಶೆಟ್ಟಿಹಳ್ಳಿಯಲ್ಲಿ ಜಾಗೃತಿ, ತಂಬಾಕು ನಿಯಂತ್ರಣ ಕಾಯ್ದೆಯಡಿ ದಂಡ

ಬಾಶೆಟ್ಟಿಹಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ವೇಳೆ ಸಾರ್ವಜನಿಕರಲ್ಲಿ ಕ್ಷಯರೋಗದ ಲಕ್ಷಣಗಳು, ಹರಡುವಿಕೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ COPTA ಕಾಯ್ದೆಯಡಿ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು.

ಅಲ್ಲದೆ, ವಿವಿಧ ಅಂಗಡಿ ಹಾಗೂ ವಾಣಿಜ್ಯ ಮಳಿಗೆಗಳ ಪಂಚಾಯಿತಿ ಪರವಾನಗಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಪರವಾನಿಗೆ ಹೊಂದಿರದವರಿಗೆ ದಂಡ ವಿಧಿಸುವ ಮೂಲಕ ಕ್ರಮ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ನಾಗೇಶ್, ವೈದ್ಯಾಧಿಕಾರಿ ಡಾ. ಮಂಜುವಾಣಿ, ಹಿರಿಯ ನಿರೀಕ್ಷಣಾಧಿಕಾರಿ ನಾಗರಾಜು, ಸಮುದಾಯ ಆರೋಗ್ಯ ಅಧಿಕಾರಿ ನರೇಂದ್ರ, ಸಮುದಾಯ ಸಂಘಟನಾ ಅಧಿಕಾರಿ ರೂಪ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

41 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

13 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

19 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago