ಪತ್ನಿಯಿಂದಲೇ ಪತಿ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ 7:30 ಗಂಟೆಗೆ ಕೊಡಗಿನ ಮೂರ್ನಾಡು ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರದ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದ ಧರ್ಮ(26) ಎಂಬತನನ್ನು ಪತ್ನಿ ಶ್ರೀಜಾ (24) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ ಎನ್ನಲಾಗಿದೆ.
ಕಳೆದ 10 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಧರ್ಮ ಇಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸಂದರ್ಭ ಪತ್ನಿ ಶ್ರೀಜಾ ಕೈಲಿದ್ದ ಚಾಕುವಿನಿಂದ ಆತನನ್ನು ತಿವಿದ ಪರಿಣಾಮ ಧರ್ಮ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಮಹೇಶ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಗಿ, ಮೂರ್ನಾಡು ಪೊಲೀಸ್ ಠಾಣೆಯ ಎ.ಎಸ್. ಐ ಶ್ರೀನಿವಾಸ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸದ್ಯ ಪೊಲೀಸರು ಶ್ರೀಜಾಲನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…