ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ವಿರೋಧಿಗಳ ಟೀಕೆಗೆ ಉತ್ತರವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿಧಾನಸಭಾ ಕ್ಷೇತ್ರಕ್ಕೆ ಸರಕಾರದಿಂದ ಅನುದಾನ ತಂದು ಅಭಿವೃದ್ಧಿ ಮಾಡೋದು ನನಗೆ ಗೊತ್ತಿದೆ ವಿರೋಧಿಗಳ ಟೀಕೆಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಮಾಡೋ ಕೆಲಸಗಳು ಸಾಕಷ್ಟು ಇವೆ ಅವುಗಳ ಕಡೆ ಗಮನ ಕೊಡತ್ತೇನೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಇವತ್ತು ಕೂಡ ಸಾರ್ವಜನಿಕರು ಕೋಲಾರಮ್ಮ ದೇವಿಯ ರಥೋತ್ಸವ ನಡೆಯುವ ರಸ್ತೆಯ ಅಭಿವೃದ್ಧಿಗೆ ಮನವಿ ಮಾಡಿದರು ಕೂಡಲೇ ಅಧಿಕಾರಿಗಳ ಗಮನಕ್ಕೆ ತಂದು ರಸ್ತೆ ಮಾಡುವಂತೆ ತಿಳಿಸಿದ್ದೇನೆ. ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಯಾಗಲಿ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮ ವಹಿಸಲಾಗುತ್ತಾ ಇದೆ. ಸುಮ್ಮನೆ ವಿರೋಧಿಗಳ ಟೀಕೆಗೆ ಉತ್ತರಿಸುವುದರಿಂದ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೋಲಾರ ನಗರದ ಎಲ್ಲಾ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿ ಮಾಡಲು ಮುಂದಾಗಿದ್ದೇವೆ. ಈಗಾಗಲೇ ಕಾಂಗ್ರೆಸ್ ಸರಕಾರ ಬಂದ ನಂತರ ಕೆಲವು ಪ್ರಮುಖ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಹಿಂದೆ ಮುಳಬಾಗಿಲು ಕ್ಷೇತ್ರದಲ್ಲಿ ಶಾಸಕನಾಗಿದ್ದ ಸಂದರ್ಭದಲ್ಲಿ ನಡೆದ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಕೇವಲ 20 ದಿನದಲ್ಲಿ ನನ್ನನ್ನು ಕೋಲಾರ ಕ್ಷೇತ್ರದ ಜನ ಶಾಸಕನಾಗಿ ಆಶೀರ್ವದಿಸಿದ್ದಾರೆ. ಅವರ ಋಣ ತೀರಿಸಲು ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಕಾಲ ಮಿತಿಯೊಳಗೆ ಕೋಲಾರ ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಿ ಮಹಾನಗರ ಪಾಲಿಕೆ ಮಾಡಲು ಸರಕಾರ ಬದ್ಧವಾಗಿದೆ ಜಿಲ್ಲೆಯಾದ್ಯಂತ ಸೇರಿದಂತೆ ಕೋಲಾರ ಕ್ಷೇತ್ರದಲ್ಲಿ ಕೈಗೆತ್ತಿಕೊಳ್ಳುವ ಯಾವುದೇ ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸಿನ ಅಡ್ಡಿ ಎದುರಾಗದು ಎಂದು ತಿಳಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ಕಾಲೇಜುಗಳ ಅಭಿವೃದ್ಧಿಗೆ ಸುಮಾರು 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹೊಸ ಬಸ್ ನಿಲ್ದಾಣ ಮತ್ತು ಹಳೆ ಬಸ್ ನಿಲ್ದಾಣದ ಅಭಿವೃದ್ಧಿಗೆ ವಿಶೇಷವಾಗಿ ಅನುದಾನವನ್ನು ಬಿಡುಗಡೆ ಮಾಡಿಸಲಾಗಿದೆ ಕೋಲಾರ ರಿಂಗ್ ರಸ್ತೆಗೆ ಈಗಾಗಲೇ ಡಿಪಿಆರ್ ಸಿದ್ದಪಡಿಸಲಾಗಿದ್ದು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಪಿಎಂಸಿ ಜಾಗದ ಸಮಸ್ಯೆ ಇತ್ಯರ್ಥಪಡಿಸಲಾಗುತ್ತದೆ. ಜನಕ್ಕೆ ಕುಡಿಯುವ ನೀರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಮಸ್ಯೆಗಳಿಗೆ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅಧಿಕಾರಿಗಳು ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಿಂದಾಗಿ ಸುಮಾರು ಎರಡು ತಿಂಗಳು ಕಾಲ ನೀತಿ ಸಂಹಿತೆ ಜಾರಿಯಲ್ಲಿ ಇತ್ತು ಅ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿತ್ತು ಈಗ ಚುನಾವಣಾ ಕೆಲಸಗಳು ಮುಗಿದಿದ್ದು, ಕೂಡಲೇ ಅಧಿಕಾರಿಗಳು ಸಹ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚಿಸಲಾಗಿದೆ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವ ಸರಕಾರವಾಗಿದ್ದು ಯಾವುದೇ ಸಮಸ್ಯೆ ಎದುರಾದರೂ ಅಭಿವೃದ್ಧಿಯಿಂದ ಹಿಂದೆ ಸರಿಯಲ್ಲ ಚುನಾವಣೆ ಪೂರ್ವದಲ್ಲಿ ನಿಂತಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಸೂಕ್ತ ಸಮಯದಲ್ಲಿ ಉತ್ತಮ ಗುಣಮಟ್ಟದಿಂದ ನಿರ್ಮಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *