ಕ್ಷೌರದಂಗಡಿಯ ಕ್ಷೌರಿಕನೊಬ್ಬ ಗ್ರಾಹಕನಿಗೆ ಎಂಜಲು ಉಗಿದು ಫೇಸ್ ಮಸಾಜ್ ಮಾಡುತ್ತಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿ ನಡೆದಿದೆ.
ಈ ಕೃತ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ಷೌರಿಕನನ್ನು ಬಂಧಿಸಿದ್ದಾರೆ.
ಯುವಕ ತನ್ನ ಸೌಂದರ್ಯವನ್ನು ಹೆಚ್ಚಿಸಲು ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಸಿಕೊಂಡಿದ್ದಾನೆ. ಆದರೆ ಅಲ್ಲಿನ ಕ್ಷೌರಿಕ ಎಂಜಲು ಉಗಿದು ಫೇಸ್ ಮಸಾಜ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾನೆ.
ಕ್ಷೌರಿಕ ಅಮ್ಜದ್ ಎಂಜಲು ಉಗುಳಿ ತನ್ನ ಗ್ರಾಹಕರಿಗೆ ಫೇಸ್ ಮಸಾಜ್ ಮಾಡಿದ್ದಾನೆ. ಈತನ ಕೃತ್ಯದ ವಿಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ ಎಫ್.ಐ.ಆರ್ ದಾಖಲಿಸಿ ಪೊಲೀಸರು ಅಮ್ಜದ್ನನ್ನು ಬಂಧಿಸಿದ್ದಾರೆ. ಈತನ ಈ ಕೃತ್ಯದಿಂದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.