ದಲಿತರ ಕ್ಷೌರಕ್ಕೆ ನಿರಾಕರಣೆ ಆರೋಪ: ಗ್ರಾಮಕ್ಕೆ ಅಧಿಕಾರಿಗಳು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಭೇಟಿ ಪರಿಶೀಲನೆ: ಪ್ರಕರಣ ಇತ್ಯರ್ಥ

ತಾಲೂಕಿನ ಕಾಡನೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ ನಿರಾಕರಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ಷೌರ ನಿರಾಕರಣೆ ಆರೋಪವನ್ನು ಇತ್ಯರ್ಥಗೊಳಸಿದರು.

ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ,  21ನೇ ಶತಮಾನದಲ್ಲೂ ಇಂತಹ ಆರೋಪ ಕೇಳಿ ಬರುವುದು ಹಾಗೂ ಅಸ್ಪೃಶ್ಯತೆ ಆಚರಣೆ ಮಾಡುವುದು ವಿಷಾದನೀಯ ವಿಚಾರವಾಗಿದೆ. ಗ್ರಾಮಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದಾಗ, ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಸೋಮು ಎಂಬುವವರು ಯಾವುದೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿಲ್ಲ. ಆದರೆ ಆರೋಪ ಕೇಳಿ ಬಂದ ದಿನವೇ ಅದೇ ಸಮುದಾಯದ ವ್ಯಕ್ತಿಗೆ ಕ್ಷೌರಿಕೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ ಎಂದರು.

ಈ ಬಗ್ಗೆ ಸವಿತ ಸಮಾಜದ ತಾಲೂಕು ಕಾರ್ಯದರ್ಶಿ  ನರಸಿಂಹ ರಾಜು ಮಾತನಾಡಿ, ತಾಲೂಕು ಮಟ್ಟದಲ್ಲಿ  ಸವಿತ ಸಮಾಜದ ಜಾಗೃತಿ ಸಭೆಯನ್ನು ಮುಂದಿನ ದಿನಗಳಲ್ಲಿ ಆಯೋಜಿಸಿ ಯಾವುದೇ ತಾರತಮ್ಯ  ಮಾಡಬಾರದೆಂಬ ಜಾಗೃತಿ ಸಭೆಯನ್ನು ಏರ್ಪಡಿಸಲಾಗುವುದು ಹಾಗೂ ತಾಲೂಕಿನಲ್ಲಿ ಇದುವರೆಗೂ ಯಾವುದೇ ಈ ತರಹದ ಪ್ರಕರಣಗಳು ಕಂಡುಬಂದಿಲ್ಲ  ಇನ್ನು ಮುಂದೆ ಯಾವುದೇ ತಾರತಮ್ಯವಾಗದಂತೆ  ಬುದ್ಧಿವಾದ ಹೇಳಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಓಬಳೇಶ್, ಪೋಲಿಸ್ ಸಿಬ್ಬಂದಿ ಸುರೇಶ್, ಪಿಡಿಒ  ಸೂರ್ಯನಾರಾಯಣ್, ಸವಿತಾ ಸಮಾಜದ  ಮುಖಂಡರಾದ ರಾಮಂಜಿನೇಯ ಶ್ರೀನಾಥ್  ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

20 minutes ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

10 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

14 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

23 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago