ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ..

ವಿರೂಪಾಕ್ಷ ಕಣಬರಗಿ, ಫಕೀರಪ್ಪ ಕರಿಗಾರ ಬಂಧಿತ ಆರೋಪಿಗಳು.

ಈ ಕಳ್ಳರು ಸಂಕೇಶ್ವರ ಅಷ್ಟೇ ಅಲ್ಲದೇ ಹಲವು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದರು. ತನಿಖೆ ವೇಳೆ 27 ಬೈಕ್ ಗಳನ್ನು ಕಳ್ಳತನ ಮಾಡಿರೋ ಬಗ್ಗೆ ಧೃಢಪಟ್ಟಿದೆ.

ಸಂಕೇಶ್ವರ ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ ರಾಮರಾಜನ್ ಮೆಚ್ಚುಗೆ ವ್ಯಕ್ಯಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!