ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ಜಪ್ತಿ ಮಾಡಲಾಗಿದೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕುಗಳು ಕಳ್ಳತನವಾಗುತ್ತಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ಸಂಬಂಧಪಟ್ಟ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.
ಶಿಡ್ಲಘಟ್ಟ ಮೂಲದ ಆರೋಪಿ ಮುಭಾರಕ್ ಖಾನ್ @ ಮಟನ್ ಮುಭಾರಕ್ ಬಿನ್ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣೆಯ-02. ತುಮಕೂರು ನಗರ ಪೊಲೀಸ್ ಠಾಣೆಯ-03, ಶ್ರೀನಿವಾಸಪುರ ಠಾಣೆಯ-02. ಆಂಧ್ರಪ್ರದೇಶದ ಕುಪ್ಪಂ ಪೊಲೀಸ್ ಠಾಣೆಯ-01, ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ-01. ಯಲಹಂಕ ಪೊಲೀಸ್ ಠಾಣೆಯ-01. ಬಾಗೇಪಲ್ಲಿ ಪೊಲೀಸ್ ಠಾಣೆಯ-01, ಪಾವಗಡ ಪೊಲೀಸ್ ಠಾಣೆಯ-01, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ-01, ನೆಲಮಂಗಲ ಪೊಲೀಸ್ ಠಾಣೆಯ-01 ಮತ್ತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯ-01 ಮತ್ತು ಇತರೆ ಪ್ರಕರಣಗಳು ದಾಖಲಾಗದೇ ಇರುವ ದ್ವಿಚಕ್ರ ವಾಹನಗಳು-27 ಒಟ್ಟು 42 ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುತ್ತಾನೆ ಎಂದು ತಿಳಿದುಬಂದಿದ್ದು, ಕೂಡಲೇ 11,60,511 ಮೌಲ್ಯದ 42ಬೈಕ್ ಗಳನ್ನು ವಶಪಡಿಸಿಕೊಳ್ಳಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಶ್ರಮಿಸಿದ ಚಂದ್ರಶೇಖರ್, ಡಿ.ವೈ.ಎಸ್.ಪಿ. ತುಮಕೂರು ಉಪವಿಭಾಗ, ರಾಮ ಪ್ರಸಾದ, ಸಿಪಿಐ, ಕ್ಯಾತ್ಸಂದ್ರ ವೃತ್ತ. ಚೇತನ್ ಕುಮಾರ್, ಎಸ್.ಎಸ್, ಪಿ.ಎಸ್.ಐ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಮತ್ತು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಮೇಶ್.ಜಿ. ಎ.ಎಸ್.ಐ. ಸೌಭಾಗ್ಯಮ್ಮ ಮ.ಹೆಚ್.ಸಿ, ಹನುಮರಂಗಯ್ಯ, ಹೆಚ್.ಸಿ, ಶಶಿಧರ ಹೆಚ್.ಸಿ, ಮಹೇಶ್. ಹೆಚ್.ಸಿ. ಗಿರೀಶ್ ಸಿಪಿಸಿ, ಶರಣಪ್ಪ ಸಿಪಿಸಿ, ನದೀಂಪಾಷ ಸಿಪಿಸಿ, ಸಂತೋಷ್ ಸಿಪಿಸಿ ಇವರುಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…