Categories: ತುಮಕೂರು

ಖತರ್ನಾಕ್ ಬೈಕ್ ಚೋರ ಅರೆಸ್ಟ್: ಬಂಧಿತನಿಂದ 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳ ಜಪ್ತಿ

ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ.‌ ಬಂಧಿತ ಆರೋಪಿಯಿಂದ ಸುಮಾರು 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ಜಪ್ತಿ ಮಾಡಲಾಗಿದೆ.

ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕುಗಳು ಕಳ್ಳತನವಾಗುತ್ತಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ  ಸಂಬಂಧಪಟ್ಟ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

ಶಿಡ್ಲಘಟ್ಟ ಮೂಲದ ಆರೋಪಿ ಮುಭಾರಕ್ ಖಾನ್ @ ಮಟನ್ ಮುಭಾರಕ್ ಬಿನ್ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣೆಯ-02. ತುಮಕೂರು ನಗರ ಪೊಲೀಸ್ ಠಾಣೆಯ-03, ಶ್ರೀನಿವಾಸಪುರ ಠಾಣೆಯ-02. ಆಂಧ್ರಪ್ರದೇಶದ ಕುಪ್ಪಂ ಪೊಲೀಸ್ ಠಾಣೆಯ-01, ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ-01. ಯಲಹಂಕ ಪೊಲೀಸ್ ಠಾಣೆಯ-01. ಬಾಗೇಪಲ್ಲಿ ಪೊಲೀಸ್ ಠಾಣೆಯ-01, ಪಾವಗಡ ಪೊಲೀಸ್ ಠಾಣೆಯ-01, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ-01, ನೆಲಮಂಗಲ ಪೊಲೀಸ್ ಠಾಣೆಯ-01 ಮತ್ತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯ-01 ಮತ್ತು ಇತರೆ ಪ್ರಕರಣಗಳು ದಾಖಲಾಗದೇ ಇರುವ ದ್ವಿಚಕ್ರ ವಾಹನಗಳು-27 ಒಟ್ಟು 42 ದ್ವಿಚಕ್ರ ವಾಹನಗಳನ್ನು‌ ಕಳವು ಮಾಡಿರುತ್ತಾನೆ ಎಂದು ತಿಳಿದುಬಂದಿದ್ದು, ಕೂಡಲೇ 11,60,511‌ ಮೌಲ್ಯದ 42ಬೈಕ್ ಗಳನ್ನು ವಶಪಡಿಸಿಕೊಳ್ಳಾಗಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಶ್ರಮಿಸಿದ ಚಂದ್ರಶೇಖರ್, ಡಿ.ವೈ.ಎಸ್.ಪಿ. ತುಮಕೂರು ಉಪವಿಭಾಗ, ರಾಮ ಪ್ರಸಾದ, ಸಿಪಿಐ, ಕ್ಯಾತ್ಸಂದ್ರ ವೃತ್ತ. ಚೇತನ್ ಕುಮಾರ್, ಎಸ್.ಎಸ್, ಪಿ.ಎಸ್.ಐ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಮತ್ತು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಮೇಶ್.ಜಿ. ಎ.ಎಸ್.ಐ. ಸೌಭಾಗ್ಯಮ್ಮ ಮ.ಹೆಚ್.ಸಿ, ಹನುಮರಂಗಯ್ಯ, ಹೆಚ್.ಸಿ, ಶಶಿಧರ ಹೆಚ್.ಸಿ, ಮಹೇಶ್. ಹೆಚ್.ಸಿ. ಗಿರೀಶ್ ಸಿಪಿಸಿ, ಶರಣಪ್ಪ ಸಿಪಿಸಿ, ನದೀಂಪಾಷ ಸಿಪಿಸಿ, ಸಂತೋಷ್ ಸಿಪಿಸಿ ಇವರುಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

10 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

10 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

17 hours ago