ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಿ- ಸಿಎಂ ಸಿದ್ದರಾಮಯ್ಯ

ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಮಾಹಿತಿ ಹಾಗೂ ಸೂಚನೆಗಳು

• ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ.

• ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌, ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.

• ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್‌ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್‌ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು.

• ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್‌ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್‌ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.

• ಬಿಬಿಎಂಪಿಯಲ್ಲಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು.

• ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಬೇಕು. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

• ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟಲೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ.

• ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು.

• ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್‌ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ‌ ಕೈಗೊಳ್ಳಬೇಕು.

• ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು.

• ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ.

• ಈ ವರ್ಷ ಡಿಸೆಂಬರ್‌ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ.

• ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.

• ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ವಹಿಸಬೇಕು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago