ಖಾಸಗಿ ಕಂಪನಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಗೆ ಗಂಭೀರ ಗಾಯಗಳಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಜೆ.ಕೆ. ಪೇಂಟ್ಸ್ ಕಾರ್ಖಾನೆ ಬಳಿ ಇಂದು ಮಧ್ಯಾಹ್ನ ನಡೆದಿದೆ.
ರಘುನಾಥಪುರದಿಂದ ಬೈಕ್ ಬರುತ್ತಿತ್ತು, ಡಿಕ್ರಾಸ್ ಕಡೆಯಿಂದ ಖಾಸಗಿ ಕಂಪನಿ ಬಸ್ ಆಗಮಿಸುತ್ತಿತ್ತು. ಮೊದಲು ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಬೈಕ್ ಬೀಳುತ್ತದೆ. ಸುಮಾರು 100 ಮೀ. ದೂರದಷ್ಟು ಬೈಕ್ ನ್ನು ಬಸ್ ಎಳೆದೊಯ್ದಿದೆ. ಈ ವೇಳೆ ಬೈಕ್ ಸವಾರರು ಗಂಭೀರ ಗಾಯಗೊಂಡಿರುತ್ತಾರೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.