ಖಾಸಗಿ ಕಾಲೇಜುಗಳಲ್ಲಿ ಬಿಜೆಪಿ ಸದಸ್ಯತ್ವ ಪ್ರಾರಂಭ

ಕೋಲಾರ: ನಗರ ಮತ್ತು ಗ್ರಾಮೀಣ ಪ್ರದೇಶದ ಖಾಸಗೀ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿನ ವಿಧ್ಯಾರ್ಥಿಗಳ ಒತ್ತಾಯದ ಮೇರೆಗೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಬುಧವಾರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ ದೇಶದಲ್ಲಿ ಶಿಕ್ಷಣವು ನಮ್ಮ ನಾಗರೀಕತೆಯ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ತಮ್ಮ ಭವಿಷ್ಯವನ್ನು ಶಿಕ್ಷಣ ನಿರ್ಮಿಸುತ್ತಾ ಇದ್ದು ಇದಕ್ಕಾಗಿಯೇ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಶಿಕ್ಷಣಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದಾರೆ ದೇಶದಲ್ಲಿ ಬಿಜೆಪಿ ಪಕ್ಷವು ಉತ್ತಮ ಆಡಳಿತದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರಕಾರದ ಉದ್ದೇಶವಾಗಿದ್ದು ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಬೆಂಬಲಿಸುವಂತೆ ಮನವಿ ಮಾಡಿದರು.

ಭಾರತ ದೇಶವು ಕಳೆದ 2014 ರ ನಂತರ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ವಿಶ್ವದಲ್ಲಿಯೇ ಗುರುತಿಸಿಕೊಳ್ಳುಂತೆ ಮಾಡಿದ್ದಾರೆ ಜೊತೆಗೆ ದೇಶವು ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಹೊರಟಿದ್ದು ಇದಕ್ಕೆ ಮೋದಿ ಮತ್ತು ಬಿಜೆಪಿಯ ಆಡಳಿತವೇ ಕಾರಣವಾಗಿದೆ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ವಿಧ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಭರವಸೆಯ ತಳಹದಿಯನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡು ಭವಿಷ್ಯಕ್ಕೆ ದಾರಿಯಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸಿ ಎಂದರು.

ಬಿಜೆಪಿ ಪಕ್ಷವು ವಿಧ್ಯಾರ್ಥಿಗಳಿಗೆ ಹಾಗೂ ಜನರಿಗೆ ಸ್ಪಂದಿಸುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದೆ. ಕೋವಿಡ್ ದಿನಗಳಲ್ಲೂ ಎಲ್ಲರೂ ಸಂಕಷ್ಟದಲ್ಲಿದ್ದಾಗ ಬಿಜೆಪಿ ಕಾರ್ಯಕರ್ತರು ಮುಖಂಡರು ಮನೆಯಲ್ಲಿ ಕೂರದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು ಉಚಿತ ಆಹಾರ ಧಾನ್ಯದ ಕಿಟ್‌, ಔಷಧೀ, ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಿದ್ದು ನರೇಂದ್ರ ಮೋದಿ ಅವರ ಕನಸು ವಿಕಸಿತ ಭಾರತವನ್ನು ನನಸು ಮಾಡುವ ಕೆಲಸಕ್ಕೆ ವಿಧ್ಯಾರ್ಥಿಗಳು ಜನರು ಎಲ್ಲರೂ ಕೈ ಜೋಡಿಸಬೇಕು ಜೊತೆಗೆ ಈ ಅಭಿಯಾನವನ್ನು ತಮ್ಮ ತಮ್ಮ ಮನೆ ಮನೆಗೂ ತೆಗೆದುಕೊಂಡು ಹೋಗಿ ಪಕ್ಷವನ್ನು ಬಲ ಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಾ.ಮಾ ಅನಿಲ್ ಬಾಬು, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ದಿನೇಶ್, ಮುಖಂಡರಾದ ಮೌನೀಶ್, ನರಸಿಂಹ, ಇದ್ದರು.

Leave a Reply

Your email address will not be published. Required fields are marked *

error: Content is protected !!