ಕೋಲಾರ: ನಗರ ಮತ್ತು ಗ್ರಾಮೀಣ ಪ್ರದೇಶದ ಖಾಸಗೀ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿನ ವಿಧ್ಯಾರ್ಥಿಗಳ ಒತ್ತಾಯದ ಮೇರೆಗೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಬುಧವಾರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ಮಾಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ ದೇಶದಲ್ಲಿ ಶಿಕ್ಷಣವು ನಮ್ಮ ನಾಗರೀಕತೆಯ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ತಮ್ಮ ಭವಿಷ್ಯವನ್ನು ಶಿಕ್ಷಣ ನಿರ್ಮಿಸುತ್ತಾ ಇದ್ದು ಇದಕ್ಕಾಗಿಯೇ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಶಿಕ್ಷಣಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದಾರೆ ದೇಶದಲ್ಲಿ ಬಿಜೆಪಿ ಪಕ್ಷವು ಉತ್ತಮ ಆಡಳಿತದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರಕಾರದ ಉದ್ದೇಶವಾಗಿದ್ದು ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಬೆಂಬಲಿಸುವಂತೆ ಮನವಿ ಮಾಡಿದರು.
ಭಾರತ ದೇಶವು ಕಳೆದ 2014 ರ ನಂತರ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ವಿಶ್ವದಲ್ಲಿಯೇ ಗುರುತಿಸಿಕೊಳ್ಳುಂತೆ ಮಾಡಿದ್ದಾರೆ ಜೊತೆಗೆ ದೇಶವು ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಹೊರಟಿದ್ದು ಇದಕ್ಕೆ ಮೋದಿ ಮತ್ತು ಬಿಜೆಪಿಯ ಆಡಳಿತವೇ ಕಾರಣವಾಗಿದೆ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ವಿಧ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಭರವಸೆಯ ತಳಹದಿಯನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡು ಭವಿಷ್ಯಕ್ಕೆ ದಾರಿಯಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸಿ ಎಂದರು.
ಬಿಜೆಪಿ ಪಕ್ಷವು ವಿಧ್ಯಾರ್ಥಿಗಳಿಗೆ ಹಾಗೂ ಜನರಿಗೆ ಸ್ಪಂದಿಸುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದೆ. ಕೋವಿಡ್ ದಿನಗಳಲ್ಲೂ ಎಲ್ಲರೂ ಸಂಕಷ್ಟದಲ್ಲಿದ್ದಾಗ ಬಿಜೆಪಿ ಕಾರ್ಯಕರ್ತರು ಮುಖಂಡರು ಮನೆಯಲ್ಲಿ ಕೂರದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು ಉಚಿತ ಆಹಾರ ಧಾನ್ಯದ ಕಿಟ್, ಔಷಧೀ, ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಿದ್ದು ನರೇಂದ್ರ ಮೋದಿ ಅವರ ಕನಸು ವಿಕಸಿತ ಭಾರತವನ್ನು ನನಸು ಮಾಡುವ ಕೆಲಸಕ್ಕೆ ವಿಧ್ಯಾರ್ಥಿಗಳು ಜನರು ಎಲ್ಲರೂ ಕೈ ಜೋಡಿಸಬೇಕು ಜೊತೆಗೆ ಈ ಅಭಿಯಾನವನ್ನು ತಮ್ಮ ತಮ್ಮ ಮನೆ ಮನೆಗೂ ತೆಗೆದುಕೊಂಡು ಹೋಗಿ ಪಕ್ಷವನ್ನು ಬಲ ಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಾ.ಮಾ ಅನಿಲ್ ಬಾಬು, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ದಿನೇಶ್, ಮುಖಂಡರಾದ ಮೌನೀಶ್, ನರಸಿಂಹ, ಇದ್ದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…