ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿ ಕಡ್ಡಾಯ

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.

ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

7ನೇ ವೇತನ ಆಯೋಗ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್‌ 01 ರಿಂದ ಜಾರಿಗೆ

ಅದೇರೀತಿ ನಮ್ಮ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್‌ 01 ರಿಂದ ಜಾರಿಗೆ ಕೊಡಲಿದೆ. ಇದರಿಂದ ಸರ್ಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ ರೂ.20,208 ಕೋಟಿ ಹೆಚ್ಚುವರಿ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!