ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
7ನೇ ವೇತನ ಆಯೋಗ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 01 ರಿಂದ ಜಾರಿಗೆ
ಅದೇರೀತಿ ನಮ್ಮ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 01 ರಿಂದ ಜಾರಿಗೆ ಕೊಡಲಿದೆ. ಇದರಿಂದ ಸರ್ಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ ರೂ.20,208 ಕೋಟಿ ಹೆಚ್ಚುವರಿ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…