ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿರುತ್ತಾರೆ. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ  ರೀಚಾಜ್೯ ಮಾಡದೇ ಇರುವ ಪರಿಣಾಮ ಬಿಸವನಹಳ್ಳಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಖಾಸಗಿಯವರು ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುತ್ತಿದ್ದಾರೆ. ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ ರೀಚಾಜ್೯ ಮಾಡದೇ ಇರುವ ಪರಿಣಾಮ ಕಳೆದ ಒಂದು ತಿಂಗಳಿಂದ ಕುಡಿಯಲು ನೀರಿಲ್ಲದೇ ಜನ ಪರಿತಪಿಸುತ್ತಿದ್ದಾರೆ. ವಾರಕ್ಕೊಮ್ಮೆ ರೀಚಾರ್ಜ್ ಮಾಡಬೇಕು, ಆದರೆ ತಿಂಗಳಾದರೂ ರೀಚಾರ್ಜ್ ಮಾಡುತ್ತಿಲ್ಲ. ಕಾಯಿನ್ ಹಾಕಿ ನೀರು ಪಡೆಯಲು ಆಗುತ್ತಿಲ್ಲ. ಈ ಕುರಿತು ಪ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಆಡಳಿತಾಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಂಡಿಲ್ಲ. ಚುನಾವಣೆ ಪೂರ್ವದಲ್ಲಿ ನೀರಿನ ಘಟಕದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಒಂದು ವೇಳೆ ಸಮಸ್ಯೆ ಕಂಡುಬಂದಿದ್ದರೆ ಕೂಡಲೇ ಸರಿಪಡಿಸುತ್ತಿದ್ದರು. ಆದರೆ ಚುನಾವಣೆ ಮುಗಿದ ನಂತರ ನಮ್ಮ ಸಮಸ್ಯೆ ಕೇಳೋರಿಲ್ಲ. ಮುಖ್ಯಾಧಿಕಾರಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಬಗೆಹರಿಸದೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಕೇಳಿ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದರು.

ನಮ್ಮ ಊರಿನ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡಲು ಖಾಸಗಿಯವರಿಗೆ ಟೆಂಡರ್ ನೀಡದೇ, ಪಟ್ಟಣ ಪಂಚಾಯಿತಿಯವರೇ ಜವಾಬ್ದಾರಿ ತೆಗೆದುಕೊಳ್ಳಬೇಕು. ಒಂದೆರೆಡು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಎದುರು ಧರಣಿ ಕುಳಿತುಕೊಳ್ಳಲಾಗುವುದು ಎಂದು ಎಚ್ಚರಿಸಿದರು.. ಜೊತೆಗೆ ರಿಚಾರ್ಜ್ ಮಾಡುವವರೆಗೂ ಪರ್ಯಾಯವಾಗಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago