ಖಾಸಗಿ ಬಸ್‌ಗೆ ಟಿಪ್ಪರ್ ಡಿಕ್ಕಿ: ಬಸ್ ನಲ್ಲಿ ಬೆಂಕಿ: 10 ಮಂದಿ ಪ್ರಯಾಣಿಕರು ಸಜೀವ ದಹನ: ಹಲವರಿಗೆ ಗಾಯ

ಖಾಸಗಿ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಬೆಂಕಿಯ ಜ್ವಾಲೆಯಿಂದ ಧಗ ಧಗ ಉರಿದ ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ಈ ಘಟನೆ ಇಂದು ಮುಂಜಾನೆ ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದಿದೆ…

ಘಟನೆಯಲ್ಲಿ ಬಸ್​ನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಭಸ್ಮವಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಒದಗಿಬಂದಿದೆ..

ಇನ್ನುಳಿದವರನ್ನು ರಕ್ಷಿಸಲಾಗಿದ್ದು, ತೀವ್ರವಾಗಿ ಗಾಯಗಳಾಗಿರುವ 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ…

ಹೈದರಾಬಾದ್‌ನಿಂದ ಪಾಮೂರ್‌ಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಮತ್ತು ಚಿಮಕುರ್ತಿಯಿಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟುಕರಕಲಾಗಿವೆ. ಖಾಸಗಿ ಟ್ರಾವೆಲ್ ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ……?

ಐ ಪಿ ಎಲ್...... ಐ ಪಿ ಎಲ್ ಹಬ್ಬವೋ - ತಿಥಿಯೋ - ಶಾಪವೋ...... ಕ್ರಿಕೆಟ್ ಆಟ - ಬೆಟ್ಟಿಂಗ್…

4 hours ago

ಹೊಸಕೋಟೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆಯನ್ನು ಬೆಳೆಸಲು 'ವಿಜ್ಞಾನ ವಸ್ತು ಪ್ರದರ್ಶನ' ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು ಬೆಂಗಳೂರಿನ ಪ್ರತಿಷ್ಠಿತ…

15 hours ago

‘ಇವ ನಮ್ಮವ ಇವ ನಮ್ಮವ ವಿಧೇಯಕ-2026’ ಉಭಯ ಸದನಗಳಲ್ಲಿ ಅಂಗೀಕಾರ

ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ…

16 hours ago

ವೈದ್ಯಕೀಯ ಕಾಲೇಜು ಸ್ಥಾಪನೆಗೆ ಡಿಪಿಆರ್ ತಯಾರಿಗೆ ಸೂಚನೆ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಲೋಕೋಪಯೋಗಿ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ…

17 hours ago

ಅಕಾಲಿಕ ಮತ್ತು ಆಲಿಕಲ್ಲು ಮಳೆ: 3,196 ಹೆಕ್ಟೇರ್ ಕೃಷಿ ಬೆಳೆ, 3697.96 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ- ಶೀಘ್ರವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ನೀಡಲಾಗುವುದು- ಸಚಿವ ಪ್ರಿಯಾಂಕ್ ಖರ್ಗೆ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ…

21 hours ago