ಖಾಸಗಿ ಬಸ್ ಹಾಗೂ ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿ ಬುಲೆಟ್ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯದ ರಘುನಾಥಪುರ ಬಳಿ ನಡೆದಿದೆ.
ದೇವನಹಳ್ಳಿ ಮೂಲದ ಟಿ.ಅಗ್ರಹಾರದ ಸಾಗರ್(20), ಮೃತ ದುರ್ದೈವಿ.
ತಡರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಜೆವಿನ್ ಟ್ರಾವೆಲ್ಸ್ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿ ಹೊಡಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.