
ತೂಬಗೆರೆ: ಇತ್ತೀಚೆಗೆ ನಡೆದ ಬೆಂಗಳೂರು ಗ್ರಾಮಾಂತರ ಪ್ರೌಢಶಾಲಾ ಶಾಲಾ ವಿಭಾಗದ ಬಾಲಕರ ವಿಭಾಗದ ಖೋ-ಖೋ ಸ್ಪರ್ಧೆಯಲ್ಲಿ ತೂಬಗೆರೆ ಸರ್ಕಾರಿ ಪ್ರೌಢಶಾಲಾ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದರು.
ದೈಹಿಕ ಶಿಕ್ಷಕರು ಇಲ್ಲದಿದ್ದರೂ ಸಹ ಮಕ್ಕಳು ಕಠಿಣ ಅಭ್ಯಾಸದ ಫಲವಾಗಿ ಈ ಸಾಧನೆ ಮಾಡಿರುವುದು ಗ್ರಾಮಸ್ಥರಿಗೆ ಹರ್ಷ ತಂದಿದೆ.