ಖ್ಯಾತ ಆರ್ಥಿಕ‌ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್(92) ವಿಧಿವಶ

ಖ್ಯಾತ ಆರ್ಥಿಕ‌ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಡಿ. 26ರಂದು ಇಹಲೋಕ ತ್ಯಜಿಸಿದ್ದಾರೆ. ಡಿ. 26ರ ಸಂಜೆ ಅವರನ್ನು ತೀವ್ರ ಅನಾರೋಗ್ಯದಿಂದ ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ರಾತ್ರಿ 10:15ರ ಸುಮಾರಿಗೆ ಅವರು ನಿಧನರಾಗಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.

ಮನಮೋಹನ್ ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು.

ಸಿಂಗ್ ಅವರ ರಾಜಕೀಯ ಜೀವನ 1991ರಲ್ಲಿ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು. ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.

1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.

6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ. 1999 ರಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿಂಗ್, ಬಿಜೆಪಿಯ ವಿಜಯ್ ಕುಮಾರ್ ಮಲ್ಹೋತ್ರ ವಿರುದ್ಧ ಪರಾಭವಗೊಂಡಿದ್ದರು.

ಅಸ್ಸಾಂ ನಿಂದ 5 ಬಾರಿ ಹಾಗೂ ಅಲ್ಪಾವಧಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು.

1932 ರ ಸೆ.26 ರಂದು ಅಂದಿನ ಅವಿಭಜಿತ ಭಾರತದಲ್ಲಿ ಜನಿಸಿದ ಡಾ. ಮನಮೋಹನ್ ಸಿಂಗ್, 1972 ರಲ್ಲಿ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

1982-1985 ಅವಧಿಯಲ್ಲಿ ಆರ್ ಬಿಐ ಗವರ್ನರ್ ಆಗಿಯೂ ಕಾರ್ಯನಿರ್ವಹಿಸಿದ್ದರು.

ಅಸಾಧಾರಣ ಶೈಕ್ಷಣಿಕ ಹಿನ್ನೆಲೆಯೊಂದಿಗೆ, ಸಿಂಗ್ BA ಮತ್ತು MA ಎರಡರಲ್ಲೂ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಅಗ್ರಸ್ಥಾನ ಪಡೆದಿದ್ದರು. ಕೇಂಬ್ರಿಡ್ಜ್‌ನಲ್ಲಿ ಹೆಚ್ಚಿನ ಅಧ್ಯಯನವನ್ನು ಪಡೆದ ಅವರು, ಆಕ್ಸ್‌ಫರ್ಡ್‌ನಿಂದ ಡಾಕ್ಟರೇಟ್ ಪದವಿ ಗಳಿಸಿದರು.

ಹಣಕಾಸು ಸಚಿವರಾಗಿ, ಅವರು ಭಾರತವನ್ನು ಖಾಸಗೀಕರಣ, ಉದಾರೀಕರಣ ಮತ್ತು ಜಾಗತೀಕರಣದತ್ತ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

6 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

7 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

7 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

8 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

9 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

13 hours ago