ಖ್ಯಾತ ಆಹಾರ ತಜ್ಞ ಕೆ.ಸಿ.ರಘು (60), ಇನ್ನಿಲ್ಲ

ಖ್ಯಾತ ಆಹಾರ ತಜ್ಞ, ಚಿಂತಕ, ಲೇಖಕ, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಘು (60) ಅವರು ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದು, ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಅವರು ಮಾಹಿತಿ ನೀಡಿದ್ದಾರೆ.

ಆಹಾರ ಆರೋಗ್ಯದ ವಿಚಾರದಲ್ಲಿ ಸಂಪತ್ಭರಿತ ಜ್ಞಾನ ಹೊಂದಿದವರಾಗಿದ್ದರು, ಆಹಾರ ವಿಚಾರದಲ್ಲಿ  ಸಾಕಷ್ಟು ನಿಖರ ವಿಚಾರ ವಿನಿಮಯ ಮಾಡುತ್ತಿದ್ದ ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ರಘು ಅವರು ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.

ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

3 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

19 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

20 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago