ಇಂದು (ಮೇ 20) ಜೂ.ಎನ್‌ಟಿಆರ್ 40ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ತಮ್ಮ ಹೊಸ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಸಿನಿಮಾ ಶೀರ್ಷಿಕೆ ಏನೂ? ನಿರ್ದೇಶಕರು ಯಾರು?
ಯಂಗ್ ಟೈಗರ್ ಜೂ. ಎನ್‌ಟಿಆರ್ ಅಭಿಮಾನಿಗಳು ಕಾತರದಿಂದ ನೋಡುತ್ತಿರುವ ಸಮಯ ಬಂದಿದೆ. ಕೊನೆಗೂ ಎನ್ ಟಿ ಆರ್ ಹಾಗೂ ಖ್ಯಾತ ನಿರ್ದೇಶಕ ಕೊರಟಾಲ ಶಿವ ಕಾಂಬಿನೇಷನ್ ನಲ್ಲಿ ತಯಾರಾಗುತ್ತಿರುವ ಚಿತ್ರಕ್ಕೆ ಟೈಟಲ್ ಫೈನಲ್ ಆಗಿದೆ.
ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. #NTR30 ಚಿತ್ರಕ್ಕೆ “ದೇವರ” ಎಂಬ ಟೈಟಲ್ ಸಹ ಫೈನಲ್ ಮಾಡಲಾಗಿದೆ.
ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಜೂ. ಎನ್‌ಟಿಆರ್ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿ ಬಳಗದಲ್ಲಿ ಸಂಭ್ರಮ ಮನೆ ಮಾಡಿದೆ.
ಎನ್‌ಟಿಆರ್ ಆರ್ಟ್ಸ್ ಮತ್ತು ಯುವಸುಧಾ ಆರ್ಟ್ಸ್ ಬ್ಯಾನರ್‌ನಲ್ಲಿ ಸುಧಾಕರ್ ಮಿಕ್ಕಿಲಿನೇನಿ, ಹರಿಕೃಷ್ಣ ಕೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ ನೀಡಲಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…