ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಮೋಸ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಬೆಂಗಳೂರು ನಗರದ ಅಪರಾಧ ವಿಭಾಗವು ಯಶಸ್ವಿಯಾಗಿದೆ. ಆರೋಪಿಯು ದೂರುದಾರರಿಗೆ 15 ಲಕ್ಷ ನೀಡುವಂತೆ ಬಲವಂತ ಮಾಡುತ್ತಿದ್ದು, ಈ ದೂರಿನ ಬಗ್ಗೆ ತನಿಖೆ ನಡೆಸಿದ ಬಳಿಕ ಆರೋಪಿಯು ಸಾರ್ವಜನಿಕರ ಚೆಕ್ ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಿ ನಂತರ ಎಟಿಎಂ ಮೂಲಕ ಹಣವನ್ನು ಪಡೆಯುತ್ತಿದ್ದ. ಆರೋಪಿ ವಿರುದ್ಧ ವಿವಿಧ CEN (ಅಪರಾಧ, ಆರ್ಥಿಕ ಅಪರಾಧ, ಮಾದಕದ್ರವ್ಯ) ಠಾಣೆಗಳಲ್ಲಿ ಒಟ್ಟು 34 ಪ್ರಕರಣ ದಾಖಲಾಗಿದ್ದು, ಒಟ್ಟು 4,51,31,288 ರೂ. ಮೋಸ ಮಾಡಿರುವ ಆರೋಪ ದಾಖಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದರು.
ನಕಲಿ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನೀಡುತ್ತಿದ್ದ ಈ ಆರೋಪಿಯನ್ನು ಮಾ.13ರಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದರು.
ಆರೋಪಿ ಬಂಧನದ ವೇಳೆ ಪೊಲೀಸರು 2 ಲ್ಯಾಪ್ ಟಾಪ್, 6 ವಿವಿಧ ಕಂಪನಿಗಳ ಮೊಬೈಲ್, 1 ಪೆನ್ ಡ್ರೈವ್ ಹಾಗೂ 10 ಚೆಕ್ ಬುಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯ ಮೂಲಕ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, ಈ ಇಬ್ಬರು ಆರೋಪಿಗಳು 11 ಜನರಿಗೆ ಮೋಸ ಮಾಡಿದ್ದಾರೆ. ಇವರು 168,13,23,944 ರೂ.ನಷ್ಟು ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, 5 ಕೋಟಿಯಷ್ಟು ಕಮಿಷನ್ ಪಡೆದಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಮಾಹಿತಿ ನೀಡಿದರು.
ಜಾತ್ರೆ ಹಾಗೂ ಮೆರವಣಿಗೆಗಳಲ್ಲಿ ಚಿನ್ನಾಭರಣ ಕಳವು
ಜಾತ್ರೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ವಯೋವೃದ್ಧೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22ರಂದು ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಇವರಿಂದ 14.9 ಲಕ್ಷ ಮೌಲ್ಯದ 233 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.
ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಮಾ.17ರಂದು 3 ಆರೋಪಿಗಳನ್ನು ಬಂಧಿಸಿದ್ದು, ಪೊಲೀಸಲು ಇವರಿಂದ 200 ಗ್ರಾಂ ಚಿನ್ನಾಭರಣ, 2 ಕೆ.ಜಿಯಷ್ಟು ಬೆಳ್ಳಿ ಸಾಮಾಗ್ರಿಗಳು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ ₹ 16,60,000 ಆಗಿದೆ ಎಂದರು.
ಸ್ಪಾ ಮೇಲಿನ ದಾಳಿ
ಇತ್ತೀಚೆಗೆ ಸ್ಪಾ ಮೇಲಿನ ದಾಳಿಗಳ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿಯಲ್ಲಿ 31 ಮಂದಿಯನ್ನು ಬಂಧಿಸಲಾಗಿದೆ. ಜ.1ರಿಂದ ಮಾ.25ರವರೆಗೆ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, 118 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…