ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದವರಿಗೆ ಅಂದರೆ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು, ಮತ್ತು ಪಾರ್ಸಿ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆ:-

ಅ) ಏತ ನೀರಾವರಿ ಯೋಜನೆ
ಈ ಯೋಜನೆಯಡಿಯಲ್ಲಿ ನಿರಂತರವಾಗಿ ಹರಿಯುತ್ತಿರುವ ನೀರನ್ನು (ನದಿ) ಪೈಪ್‌ಲೈನ್‌ ಮೂಲಕ ಮೇಲಕ್ಕೆ ಎತ್ತಿ, ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ನಿಗಮವು ಅನುಷ್ಠಾನಗೊಳಿಸಿ ನಂತರ ಅದನ್ನು ಫಲಾನುಭವಿಗಳ ಗ್ರಾಹಕರ ಸಹಕಾರ ಸಂಘಕ್ಕೆ ಹಸ್ತಾಂತರ ಮಾಡಲಾಗುವುದು. ಉತ್ತಮ ಬೆಳೆ ಪಡೆಯುವ ಸಲುವಾಗಿ ಕೃಷಿ ತಜ್ಞರಿಂದ ಸಲಹೆ ಮತ್ತು ನೆರವನ್ನು ಕೊಡಿಸಲಾಗುವುದು, ಏತ ನೀರಾವರಿ ಯೋಜನೆಯ ಘಟಕ ವೆಚ್ಚವನ್ನು ಪ್ರತಿ ಎಕರೆಗೆ ರೂ.40,000/- ದಂತೆ ಬಿಡುಗಡೆ ಮಾಡಲಾಗುವುದು, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.

ಆ) ವೈಯಕ್ತಿಕ ಕೊಳವೆ ಬಾವಿ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಲ್ಲಿ ಹರಿಯುವ ನೀರಿನ ವ್ಯವಸ್ಥೆ ಲಭ್ಯವಿರುವುದಿಲ್ಲವೋ ಅಂತಹ ಸ್ಥಳದಲ್ಲಿ ತಜ್ಞ ಭೂ ವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲ ಬಿಂದು ವ್ಯಾಪ್ತಿಯೊಳಗೆ ನೆಲದಡಿಯಲ್ಲಿ ಕೊಳವೆ ಬಾವಿಯನ್ನು ಕೊರೆದು, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಕೊಳವೆ ಮೂಲಕ ಕೃಷಿಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.

ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆ ಬಾವಿ ಕೊರೆಯಿಸಿ ಅಥವಾ ತೆರೆದ ಬಾವಿಯನ್ನು ನಿರ್ಮಿಸಿ, ಅದಕ್ಕೆ ನಿಗಮದಿಂದ ಪಂಪ್‌ ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್‌ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.4.00 ಲಕ್ಷಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಗದಿಪಡಿಸಿರುತ್ತದೆ.  ಈ ಮೊತ್ತವು ಕೊಳವೆಬಾವಿ ಕೊರೆಯುವಿಕೆ, ಪಂಪು, ಮೋಟಾರು ಸರಬರಾಜು ಮತ್ತು ವಿದ್ಯುದೀಕರಣ ಠೇವಣಿ ಮೊತ್ತ ಒಳಗೊಂಡಿರುತ್ತದೆ.

ವಿದ್ಯುದ್ದೀಕರಣ ಠೇವಣಿ ರೂ.75000/-ವನ್ನು ನಿಗಮದಿಂದ ನೇರವಾಗಿ ಸಂಬಂಧಪಟ್ಟ ಎಸ್ಕಾಂಗಳಿಗೆ ಪಾವತಿಸಲಾಗುವುದು. ಈಗಾಗಲೇ ತಮ್ಮ ಜಮೀನಿಗೆ ನೀರಾವರಿ ಸೌಲಭ್ಯವನ್ನು ಹೊಂದಿರುವ ರೈತರಿಗೆ ಹನಿ ನೀರಾವರಿ ಅಳವಡಿಸಲು ತೋಟಗಾರಿಕೆ ಇಲಾಖೆಯ ಮಾರ್ಗಸೂಚಿ ಪ್ರಕಾರ ಸಹಾಯಧನ ನೀಡುವುದು.

1.ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ
ಧಾರ್ಮಿಕ ಅಲ್ಪಸಂಖ್ಯಾತರ
ಸಮುದಾಯಕ್ಕೆ ಸೇರಿದವರಾಗಿರಬೇಕು.
2. ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಜಮೀನಿರಬೇಕು.
3. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
4. ಅರ್ಜಿದಾರರು ಸಣ್ಣ, ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
5.ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ.96,000/- ಗಳನ್ನು ಮೀರಬಾರದು.
6. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಇರಬೇಕು.
7. ಅಂಬೇಡ್ಕರ ಅಭಿವೃದ್ಧಿ ನಿಗಮ ಮತ್ತು ದೇವರಾಜ್ ಅರಸು ಅಭಿವೃದ್ಧಿ ನಿಗಮಗಳಲ್ಲಿ ಇರುವಂತೆ ಆರ್ಜಿದಾರರ ಗರಿಷ್ಠ ವಯೋಮಿತಿ 55 ವರ್ಷ ಇರುವುದನ್ನು ರದ್ದುಪಡಿಸಲಾಗಿದೆ.

ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ಅರ್ಜಿಯನ್ನು ದಿನಾಂಕ:-22.08.2023 ರಿಂದ  25.09.2023 ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-27681786/ Gmail: kmdcbrural@gmail.com ಸಹಾಯವಾಣಿ ಸಂಖ್ಯೆ:-8277799990 (24*7) ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ
ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

4 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

6 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

8 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

8 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

15 hours ago