ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಗಂಟಿಗಾನಹಳ್ಳಿ ಗ್ರಾಮದಲ್ಲಿ ಲಕ್ಷ್ಮೀರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ, ಮೇ.3ರ ಭಾನುವಾರದಂದು ಆಯೋಜನೆ ಮಾಡಲಾಗಿದೆ.‌

ಇದರ ಅಂಗವಾಗಿ ಬೆಳಗ್ಗೆ 8ರಿಂದ ಸಂಜೆ 8ರವರೆಗೆ ವಾಲಿಬಾಲ್ ಸ್ಪರ್ಧೆ, ಮಧ್ಯಾಹ್ನ 3ಗಂಟೆಯಿಂದ ಸಂಜೆ 5ರವರೆಗೆ ರಂಗೋಲಿ ಸ್ಪರ್ಧೆ, ಸಂಜೆ 7ಗಂಟೆಯಿಂದ ರಾತ್ರಿ 10:30ರವರೆಗೆ ಆರ್ಕೆಸ್ಟ್ರಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಗಳಲ್ಲಿ ಗೆದ್ದ ಸ್ಪರ್ಧಾರ್ಥಿಗಳಿಗೆ ಸೂಕ್ತ‌ ನಗದು ಬಹುಮಾನ ನೀಡಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗೋಲಿ ಸ್ಪರ್ಧೆ

ಮೊದಲನೇ ಬಹುಮಾನ 20000/-

ಎರಡನೇ ಬಹುಮಾನ 10000/-

ಮೂರನೇ ಬಹುಮಾನ 5000/-

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನಗಳಿರುತ್ತವೆ.

ವಾಲಿಬಾಲ್ ಪಂದ್ಯಾವಳಿ

ಮೊದಲನೇ ಬಹುಮಾನ 10000/-

ಎರಡನೇ ಬಹುಮಾನ 5000/-

ಮೂರನೇ ಬಹುಮಾನ 2500/-

ಹೆಚ್ಚಿನ ಮಾಹಿತಿಗಾಗಿ ಆಯೋಜಕರಾದ ಗಂಟಿಗಾನಹಳ್ಳಿ ಮುರಳಿ ರಂಗಪ್ಪ 99165 69193 ನ್ನು ಸಂಪರ್ಕಿಸಬಹುದಾಗಿದೆ..

ಈ ವೇಳೆ ಗಂಟಿಗಾನಹಳ್ಳಿ ಗ್ರಾಮಸ್ಥರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪ್ರಾಂಶುಪಾಲರು, ಸಹ/ಸಹಾಯಕ ಪ್ರಧ್ಯಾಪಕರು, ಅತಿಥಿ ಉಪನ್ಯಾಸಕರು ಮತ್ತು ಬೋಧಕೇತರ ವರ್ಗ, ಕಾಲೇಜು ವಿದ್ಯಾರ್ಥಿ ವೃಂದ ಇರಲಿದ್ದಾರೆ…

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

4 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

7 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

18 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago