ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗಂಡ್ರಗೊಳಿಪುರ ವ್ಯವಸಾಯ ಸೇವಾ ಸಹಕಾರ ಸಂಘ(ವಿ ಎಸ್ಎಸ್ ಎನ್) ಚುನಾವಣೆ ಪ್ರಕ್ರಿಯೆ ಕಾನೂನು ಬದ್ಧವಾಗಿಲ್ಲ, ಮತದಾರ ಪಟ್ಟಿಯಲ್ಲಿ ಪಹಣಿ ಹೊಂದಿಲ್ಲದ ಹಲವಾರು ಜನ ಸೇರ್ಪಡೆಯಾಗಿದ್ದಾರೆ. ಅರ್ಹ ಷೇರುದಾರರನ್ನು ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹೊರಟಿರುವುದು ಸರಿಯಲ್ಲ. ಇದು ಸಂಪೂರ್ಣ ಅಕ್ರಮವಾಗಿದೆ. ಆದ್ದರಿಂದ ಈಗ ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಈ ಕುರಿತು ಗಂಡ್ರಗೊಳಿಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನಸವಾಡಿ ಹಾಗೂ ಹೊನ್ನಾವರ ಪಂಚಾಯಿತಿ ವ್ಯಾಪ್ತಿಯ ಸುಮಾರು 800 ಷೇರುದಾರರು ಕನಸವಾಡಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಯಶಸ್ಸಿಗೆ ಕಾರಣರಾಗಿದ್ದರು. ಪ್ರಸ್ತುತ ಕನಸವಾಡಿಯಿಂದ ಬೇರ್ಪಟ್ಟು ಈಗ ಪ್ರತ್ಯೇಕವಾಗಿ ಗಂಡ್ರಗೊಳಿಪುರ ವಿಎಸ್ಎಸ್ಎನ್ ಅಸ್ತಿತ್ವಕ್ಕೆ ಬಂದಿದೆ. ಆದರೆ ಮೂಲ ಷೇರುದಾರರನ್ನು ಕೈಬಿಟ್ಟು ನಕಲಿ ಷೇರುದಾರರನ್ನ ಮತದಾರರ ಪಟ್ಟಿಗೆ ಸೇರಿಸಿ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ಈ ರೀತಿಯ ಚುನಾವಣೆಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಮತದಾರರ ಪಟ್ಟಿ ಸರಿಪಡಿಸಿ ನಂತರ ಚುನಾವಣೆ ನಡೆಸಲಿ. ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಹರೀಶ್ ಗೌಡ ಹೇಳಿದರು.
ಮತದಾರ ಪಟ್ಟಿ ಸರಿಪಡಿಸಿ ಚುನಾವಣೆ ನಡೆಸಲಿ. ಅಲ್ಲಿಯವರೆಗೆ ಚುನಾವಣೆ ಮುಂದೂಡಬೇಕು ಇಲ್ಲವಾದಲ್ಲಿ ಕಾನೂನು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.
ಈ ವೇಳೆ ವಿಎಸ್ಎಸ್ಎನ್ ಸದಸ್ಯ ಗಂಗಾಧರಯ್ಯ ಸೇರಿದಂತೆ ಗಂಡ್ರಗೊಳಿಪುರ ವಿಎಸ್ಎಸ್ಎನ್ ಷೇರುದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…