ಗಂಡ ಸತ್ತವರಿಗೆ ಹಣ ಕೊಡಿಸುವ ಆಮಿಷ: ವೃದ್ಧೆ ಬಳಿ ಚಿನ್ನದ ಸರ ಎಗರಿಸಿ ವಂಚಕ ಎಸ್ಕೇಪ್

ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.

ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.

ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ‌ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.

ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.

ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.

ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

1 hour ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

2 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

2 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

9 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

10 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

13 hours ago