ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಇವರಿಬ್ಬರ ಜಗಳದಲ್ಲಿ ಏನೂ ತಿಳಿಯದ ಪುಟ್ಟ ಕಂದಮ್ಮನನ್ನು ಪಾಪಿ ತಾಯಿ ಸಾಯಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆ.ಜಿ.ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಜಯರಾಮ್(34), ಮಹಾಲಕ್ಷ್ಮಿ (28) ಜಗಳ ಮಾಡಿಕೊಂಡ ದಂಪತಿ.
ಸಿರಿ(5) ಕೊಲೆಯಾದ ಮಗು.
ಜಯರಾಂ ಹಾಗೂ ಮಹಾಲಕ್ಷ್ಮಿ ಪ್ರೀತಿಸಿಕೊಂಡು 8 ವರ್ಷದ ಹಿಂದೆ ಮದುವೆಯಾಗಿದ್ದರು.
ಈ ಜಯರಾಮ್ ಎರಡು ವರ್ಷದಿಂದ ಕೆಲಸವಿಲ್ಲದೆ ಕುಡಿತಕ್ಕೆ ದಾಸನಾಗಿದ್ದ. ಕೆಲಸಕ್ಕೆ ಹೋಗದೆ ಮನೆಯಲ್ಲಿ ಇದ್ದನಂತೆ.
ಈ ಕುರಿತು ಮನೆಯಲ್ಲಿ ಆಗಾಗ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ಕೂಡ ಇಬ್ಬರ ನಡುವೆ ಜಗಳ ತಾರಕಕ್ಕೇರಿದ್ದು, ರೂಂ ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಮಹಾಲಕ್ಷ್ಮಿ, ರೂಮಿನಲ್ಲಿದ್ದ ಮಗುವಿನ ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾಳೆ.
ಕೂಡಲೇ ಮನೆಯವರು ಡೋರ್ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರಿಂದ ತಾಯಿ ಮಹಾಲಕ್ಷ್ಮಿಯನ್ನು ರಕ್ಷಣೆ ಮಾಡಿದ್ದಾರೆ.
ಮಹಾಲಕ್ಷ್ಮಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್ ಪಿ ಡಾ.ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಪತಿ ಜಯರಾಮ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…