Categories: Crime

ಗಂಡ ಹೆಂಡತಿ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ: ಚಾಕುವಿನಿಂದ ಇರಿದು ಪತ್ನಿಯನ್ನ ಕೊಂದ ಪಾಪಿ ಪತಿ

ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಗಂಡ ಹೆಂಡತಿ ನಡುವೆ ಕಿರಿಕ್ ಆಗಿ ಪತ್ನಿ‌ ಕೊಲೆಯಲ್ಲಿ ಅಂತ್ಯವಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಬಳಿ ಕೊಲೆ‌ ನಡೆದಿದೆ.

ಜೂ. 3ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 41 ವರ್ಷದ ಸುಜಾತ ಎಂಬ ಮಹಿಳೆಗೆ ಗಂಗಿರೆಡ್ಡಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸುಜಾತ ಮತ್ತು ಗಂಗಿರೆಡ್ಡಿ ಸೋಂಪುರದಲ್ಲಿ ಬಾಡಿಗೆ ಮನೆಗಳನ್ನ ಹೊಂದಿದ್ದರು. ಗಂಗಿರೆಡ್ಡಿ ಬಾಡಿಗೆ ಹಣದಲ್ಲಿ ಕುಡಿದು ಮಜಾ ಮಾಡುತ್ತಿದ್ದ. ಈ ಹಿನ್ನೆಲೆ ಸುಜಾತ ಇತ್ತೀಚೆಗೆ ಮನೆ ಬಾಡಿಗೆ ಹಣವನ್ನ ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದರು.

ತರಕಾರಿ ಅಂಗಡಿ ನಡೆಸುತ್ತಿದ್ದ ಸುಜಾತ ಶೀಲದ  ಮೇಲೆಯೂ ಗಂಗಿರೆಡ್ಡಿ ಶಂಕೆ ವ್ಯಕ್ತಪಡಿಸುತ್ತಿದ್ದ. ಈ ಎರಡು ವಿಚಾರಕ್ಕೆ ಇಬ್ಬರ ನಡುವೆ ನಿತ್ಯ ಪದೇ ಪದೇ ಗಲಾಟೆಯಾಗುತ್ತಿತ್ತು.

ಕಳೆದ ಮೂರನೇ ತಾರೀಖಿನಂದು ಸಹ ಇಬ್ಬರ ನಡುವೆ ಗಲಾಟೆ ನಡೆದು ತಾರಕಕ್ಕೆ ಏರೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

11 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago