ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಗಂಡ ಹೆಂಡತಿ ನಡುವೆ ಕಿರಿಕ್ ಆಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಬಳಿ ಕೊಲೆ ನಡೆದಿದೆ.
ಜೂ. 3ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 41 ವರ್ಷದ ಸುಜಾತ ಎಂಬ ಮಹಿಳೆಗೆ ಗಂಗಿರೆಡ್ಡಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸುಜಾತ ಮತ್ತು ಗಂಗಿರೆಡ್ಡಿ ಸೋಂಪುರದಲ್ಲಿ ಬಾಡಿಗೆ ಮನೆಗಳನ್ನ ಹೊಂದಿದ್ದರು. ಗಂಗಿರೆಡ್ಡಿ ಬಾಡಿಗೆ ಹಣದಲ್ಲಿ ಕುಡಿದು ಮಜಾ ಮಾಡುತ್ತಿದ್ದ. ಈ ಹಿನ್ನೆಲೆ ಸುಜಾತ ಇತ್ತೀಚೆಗೆ ಮನೆ ಬಾಡಿಗೆ ಹಣವನ್ನ ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದರು.
ತರಕಾರಿ ಅಂಗಡಿ ನಡೆಸುತ್ತಿದ್ದ ಸುಜಾತ ಶೀಲದ ಮೇಲೆಯೂ ಗಂಗಿರೆಡ್ಡಿ ಶಂಕೆ ವ್ಯಕ್ತಪಡಿಸುತ್ತಿದ್ದ. ಈ ಎರಡು ವಿಚಾರಕ್ಕೆ ಇಬ್ಬರ ನಡುವೆ ನಿತ್ಯ ಪದೇ ಪದೇ ಗಲಾಟೆಯಾಗುತ್ತಿತ್ತು.
ಕಳೆದ ಮೂರನೇ ತಾರೀಖಿನಂದು ಸಹ ಇಬ್ಬರ ನಡುವೆ ಗಲಾಟೆ ನಡೆದು ತಾರಕಕ್ಕೆ ಏರೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…