ಗಗನಯಾತ್ರೆಗೆ ನಿಯೋಜಿತರಾದ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗಗನಯಾತ್ರಿ ರೆಕ್ಕೆಗಳನ್ನು ನೀಡಿ ಶುಭಕೋರಿದರು.
ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್‌ಎಸ್‌ಸಿ) ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಗಗನಯಾತ್ರಿಗಳ ಹೆಸರನ್ನು ಬಹಿರಂಗಪಡಿಸಿದರು.
ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ – ನಾಲ್ವರು ಭಾರತೀಯ ವಾಯುಪಡೆ (IAF) ಪೈಲಟ್‌ಗಳು. 2025ಕ್ಕೆ ಯೋಜಿಸಲಾದ ಭಾರತದ ಗಗನ್ಯಾನ್ ಮಾನವ ಬಾಹ್ಯಾಕಾಶ ಯಾನಕ್ಕಾಗಿ ತರಬೇತಿ ಪಡೆಯುತ್ತಿದ್ದಾರೆ.
ಗಗನ್ಯಾನ್ ಕಾರ್ಯಕ್ರಮವನ್ನು ಲೋ ಅರ್ಥ್ ಆರ್ಬಿಟ್ (LEO) ಗೆ ಮಾನವ ಬಾಹ್ಯಾಕಾಶ ಹಾರಾಟದ ಕಾರ್ಯಾಚರಣೆಯನ್ನು ಕೈಗೊಳ್ಳಲು ಸ್ಥಳೀಯ ಸಾಮರ್ಥ್ಯವನ್ನು ಪ್ರದರ್ಶಿಸಲು ವಿನ್ಯಾಸಗೊಳಿಸಲಾಗಿದೆ. ಈ ಮಿಷನ್ ದೀರ್ಘಾವಧಿಯಲ್ಲಿ “ಸುಸ್ಥಿರ ಭಾರತೀಯ ಮಾನವ ಬಾಹ್ಯಾಕಾಶ ಪರಿಶೋಧನೆ ಕಾರ್ಯಕ್ರಮ” ಕ್ಕೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ ಎಂದು ISRO ತಿಳಿಸಿದೆ