ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಸ್ತರಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ದೊಡ್ಡಬಳ್ಳಾಪುರ ಪ್ರಖಂಡದ ಶ್ರೀ ಸ್ವಾಮಿ ವಿವೇಕಾನಂದ ಘಟಕದ ವತಿಯಿಂದ 7ನೇ ವರ್ಷದ ಗೌರಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.

ಗಣೇಶನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಯುವಕರು ಹಾಗೂ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಂಡಿದ್ದು, ಬೆಸ್ತರಪೇಟೆಯಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.

ಗಣೇಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಪರಿಸರ ಸ್ನೇಹಿ ಹಾಗೂ ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ರಾಂಪುರ ಮಜರ ವಡೇರಹಳ್ಳಿ ಗ್ರಾಮದ ಗ್ರಾಮಠಾಣಾ ಜಾಗ ಒತ್ತುವರಿ ತೆರವು

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿರುವ ಸುಮಾರು 2 ಎಕರೆ 10 ಗುಂಟೆ…

8 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ

ದೊಡ್ಡಬಳ್ಳಾಪುರ: ಹೊನ್ನದೇವಿಪುರ ಗೇಟ್ ಬಳಿಯ ಹಂದಿ ಫಾರಂನ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ…

19 hours ago

ದೀಪಾವಳಿ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಹಸಿರು ಪಟಾಕಿ ಬಳಕೆ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಗೋದಾಮು ಮುಟ್ಟುಗೋಲು, ಕ್ರಿಮಿನಲ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ…

19 hours ago

68 ಎಕರೆಗೂ ಅಧಿಕ ಸರ್ಕಾರಿ ಜಮೀನಿನ ಅಕ್ರಮ ಖಾತೆ ಬದಲಾವಣೆ ಆರೋಪ: ಹಿಂದಿನ ಎಸಿ ದುರ್ಗಶ್ರೀ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ 68 ಎಕರೆ 35 ಗುಂಟೆಗೂ ಅಧಿಕ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು…

1 day ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಪ್ರಕಟಿಸಿದ್ದು, ಒಟ್ಟು 71 ಸಾಧಕರನ್ನು…

1 day ago

ಕೆ.ಜಿ.ಎಫ್‌ನ 28 ವರ್ಷದ ಯುವತಿ ಮೆದುಳು ನಿಷ್ಕ್ರಿಯ; ಯಕೃತ್ ಹಾಗೂ ಹೃದಯದ ಕವಾಟಗಳ ದಾನ

ಕೋಲಾರ: ಮಗಳ ಅಗಲಿಕೆಯ ದುಃಖದ ನಡುವೆಯೂ ಮಾನವೀಯತೆ ಮೆರೆದ ಕುಟುಂಬವೊಂದು ಅಂಗಾಂಗ ದಾನಕ್ಕೆ ಮುಂದಾಗುವ ಮೂಲಕ ಇಬ್ಬರು ರೋಗಿಗಳ ಬದುಕಿನಲ್ಲಿ…

2 days ago