ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ನಡೆಸಿದ ದಾಳಿ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶ ಮೂರ್ತಿ ಸಮೇತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.
ಈ ಘಟನೆ ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ ‘ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು’ ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ಕಿಡಿಕಾರಿದ್ದಾರೆ.
ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿ ಸರ್ವಥಾ ಖಂಡನೀಯ, ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ಬಗ್ಗೆ ತೋರುವ ತಾತ್ಸಾರ ದೋರಣೆಯನ್ನು ಈ ಘಟನೆ ಪ್ರತಿಬಿಂಬಿಸಿದೆ, ಈ ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ ಎಂದು ಹೇಳಿದ್ದಾರೆ.
ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ ನೀಡುವುದನ್ನು ಒಪ್ಪಲಾಗದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…