Categories: ರಾಜ್ಯ

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದಿದ್ದಾರೆ.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.

ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

19 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago