ದೆಹಲಿಯಲ್ಲಿ 2024 ನೇ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ನಗರದ ಶ್ರೀಕೊಂಗಾಡಿಯಪ್ಪ ಕಾಲೇಜು ಎನ್.ಸಿ.ಸಿ ಘಟಕದಿಂದ ಜಿ.ಹಿತೇಶ್ ಅವರು ಆಯ್ಕೆಯಾಗಿದ್ದಾರೆ.
ಜಿ.ಹಿತೇಶ್ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿ ಮಗನಾಗಿದ್ದಾರೆ.
ಘಟಂ ಮತ್ತು ತಬಲ ವಾದಕನಾಗಿ ನೂರಾರು ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶನ ಮಾಡುವ ಮೂಲಕ ಯುವ ಕಲಾವಿದನಾಗಿ ಸಹ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಜಿ.ಹಿತೇಶ್ ಪಡೆದಿದ್ದಾರೆ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ ಪಡೆದುಕೊಂಡಿರುತ್ತಾರೆ.
ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ, ಪ್ರಸ್ತುತ ಬಿಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.
ಯುವಕಲಾವಿದನಾಗಿ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಜಿ.ಹಿತೇಶ್ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘದ ಕಾರ್ಯದರ್ಶಿ ಬಿ.ಚಂದ್ರಶೇಖರ್ ಅಭಿನಂದಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…