ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಶ್ರೀಕೊಂಗಾಡಿಯಪ್ಪ ಕಾಲೇಜಿನ ಎನ್.ಸಿ.ಸಿ ಘಟಕದಿಂದ ಜಿ.ಹಿತೇಶ್ ಆಯ್ಕೆ

ದೆಹಲಿಯಲ್ಲಿ  2024 ನೇ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ನಗರದ ಶ್ರೀಕೊಂಗಾಡಿಯಪ್ಪ ಕಾಲೇಜು ಎನ್.ಸಿ.ಸಿ ಘಟಕದಿಂದ ಜಿ.ಹಿತೇಶ್ ಅವರು ಆಯ್ಕೆಯಾಗಿದ್ದಾರೆ.

ಜಿ.ಹಿತೇಶ್ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿ ಮಗನಾಗಿದ್ದಾರೆ.

ಘಟಂ ಮತ್ತು ತಬಲ ವಾದಕನಾಗಿ ನೂರಾರು  ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶನ ಮಾಡುವ ಮೂಲಕ ಯುವ ಕಲಾವಿದನಾಗಿ‌ ಸಹ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಜಿ.ಹಿತೇಶ್ ಪಡೆದಿದ್ದಾರೆ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು  ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ ಪಡೆದುಕೊಂಡಿರುತ್ತಾರೆ.

ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ, ಪ್ರಸ್ತುತ ಬಿಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.

ಯುವಕಲಾವಿದನಾಗಿ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಜಿ.ಹಿತೇಶ್ ಅವರನ್ನು   ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘದ ಕಾರ್ಯದರ್ಶಿ ಬಿ.ಚಂದ್ರಶೇಖರ್ ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 hour ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

21 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago