ಗಣೇಶ ಚತುರ್ಥಿ ದಿನದಂದು ‘ಜಿಯೋ ಏರ್ ಫೈಬರ್’ ಸೇವೆ ಆರಂಭ

ಜಿಯೋದ ಹೊಸ ಯೋಜನೆ ಏರ್ ಫೈಬರ್‌ ಸೇವೆಗಾಗಿ ಇನ್ನು ಕಾಯುವ ಅಗತ್ಯವಿಲ್ಲ. ಗಣೇಶ ಚತುರ್ಥಿಯಂದು ಅಂದರೆ ಸೆಪ್ಟೆಂಬರ್ 19 ರಂದು ಜಿಯೋ ಏರ್ ಫೈಬರ್ ಸೇವೆಯನ್ನು ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘೋಷಿಸಿದ್ದಾರೆ.

ಜಿಯೋ ಏರ್ ಫೈಬರ್ 5ಜಿ ನೆಟ್‌ವರ್ಕ್ ಮತ್ತು ಅತ್ಯಾಧುನಿಕ ವೈರ್‌ಲೆಸ್ ತಂತ್ರಜ್ಞಾನವನ್ನು ಬಳಸಿಕೊಂಡು ಮನೆಗಳು ಮತ್ತು ಕಚೇರಿಗಳಿಗೆ ವೈರ್‌ಲೆಸ್ ಬ್ರಾಡ್‌ಬ್ಯಾಂಡ್ ಸೇವೆಯನ್ನು ಒದಗಿಸುತ್ತದೆ. ಜಿಯೋ ಏರ್ ಫೈಬರ್ ಆರಂಭದಿಂದಾಗಿ ದೂರಸಂಪರ್ಕ ಕ್ಷೇತ್ರದಲ್ಲಿ ಸಂಚಲನ ಉಂಟಾಗುವ ಸಾಧ್ಯತೆ ಇದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಮುಕೇಶ್ ಅಂಬಾನಿ, “ನಮ್ಮ ಆಪ್ಟಿಕಲ್ ಫೈಬರ್ ಸೇವೆಯಾದ ಜಿಯೋ ಫೈಬರ್‌ 10 ದಶಲಕ್ಷಕ್ಕೂ ಹೆಚ್ಚು ಸಂಪರ್ಕಗಳನ್ನು ಹೊಂದಿದೆ. ಇನ್ನೂ ಲಕ್ಷಾಂತರ ಮನೆಗಳಿಗೆ ಬೇಡಿಕೆ ಇದ್ದು, ಅಲ್ಲಿ ತಂತಿ ಸಂಪರ್ಕ ಕಲ್ಪಿಸುವುದು ಕಷ್ಟಕರವಾಗಿದೆ. ಈ ತೊಂದರೆಯನ್ನು ಜಿಯೋ ಏರ್ ಫೈಬರ್ ನಿವಾರಿಸುತ್ತದೆ. ಈ ಮೂಲಕ ನಾವು 20 ಕೋಟಿ ಮನೆ ಮತ್ತು ಕಚೇರಿಗಳನ್ನು ತಲುಪುವ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ.

ಜಿಯೋ ಏರ್ ಫೈಬರ್ ಆರಂಭದೊಂದಿಗೆ, ಜಿಯೋ ವಲಯಕ್ಕೆ ಪ್ರತಿದಿನ 1.5 ಲಕ್ಷ ಹೊಸ ಗ್ರಾಹಕರನ್ನು ಸೇರಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.
ಜಿಯೋದ ಆಪ್ಟಿಕಲ್ ಫೈಬರ್ ಸೌಲಭ್ಯವು ಭಾರತದಾದ್ಯಂತ 15 ಲಕ್ಷ ಕಿಮೀಗಳಷ್ಟು ಹರಡಿದೆ. ಆಪ್ಟಿಕಲ್ ಫೈಬರ್‌ನಲ್ಲಿ ಗ್ರಾಹಕರು ತಿಂಗಳಿಗೆ ಸರಾಸರಿ 280 ಜಿಬಿಗಿಂತ ಹೆಚ್ಚಿನ ಡೇಟಾವನ್ನು ಬಳಸುತ್ತಾರೆ. ಇದು ಜಿಯೋದ ತಲಾ ಮೊಬೈಲ್ ಇಂಟರ್ನೆಟ್ ಡೇಟಾ ಬಳಕೆಗಿಂತ 10 ಪಟ್ಟು ಹೆಚ್ಚು ಎಂದರು.

ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿಯೋ ಏರ್ ಫೈಬರ್ ಜೊತೆಗೆ ಜಿಯೋ ಟ್ರೂ 5ಜಿ ಡೆವಲಪರ್ ಪ್ಲಾಟ್‌ಫಾರ್ಮ್ ಮತ್ತು ಜಿಯೋ ಟ್ರೂ 5ಜಿ ಲ್ಯಾಬ್‌ಗಳನ್ನು ಪ್ರಾರಂಭಿಸುವುದಾಗಿ ಘೋಷಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ, “ಭಾರತೀಯ ಉದ್ಯಮಗಳು, ಸಣ್ಣ ಉದ್ಯಮಗಳು ಮತ್ತು ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳು ಡಿಜಿಟಲ್ ಪ್ರಪಂಚದೊಂದಿಗೆ ಸಂವಹನ ನಡೆಸುವ ವಿಧಾನವನ್ನು ಪರಿವರ್ತಿಸುವ ವೇದಿಕೆಯನ್ನು ನಾವು ನಿರ್ಮಿಸುತ್ತಿದ್ದೇವೆ. ಉದ್ಯಮಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಯೋ 5ಜಿ ನೆಟ್‌ವರ್ಕ್, ಎಡ್ಜ್ ಕಂಪ್ಯೂಟಿಂಗ್ ಮತ್ತು ಅಪ್ಲಿಕೇಶನ್‌ಗಳನ್ನು ಸಂಯೋಜಿಸುವ ಸಮಗ್ರ ವೇದಿಕೆಯನ್ನು ರಚಿಸಿದೆ. ಮತ್ತೊಂದೆಡೆ, ‘ಜಿಯೋ ಟ್ರೂ 5ಜಿ ಲ್ಯಾಬ್‌’ ನಲ್ಲಿರುವ ನಮ್ಮ ತಂತ್ರಜ್ಞಾನ ಪಾಲುದಾರರು ಉದ್ಯಮ-ನಿರ್ದಿಷ್ಟ ಪರಿಹಾರಗಳನ್ನು ಅಭಿವೃದ್ಧಿಪಡಿಸಬಹುದು, ಪರೀಕ್ಷಿಸಬಹುದು ಮತ್ತು ಸಹ-ನಿರ್ಮಾಣದಲ್ಲಿ ಜತೆಗೂಡಬಹುದು” ಎಂದು ಹೇಳಿದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

8 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

8 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

9 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

16 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

17 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

20 hours ago