ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿಂದು ನಡೆದಿದೆ.
ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ ಮತ್ತು ಲಕ್ಷ್ಮಮ್ಮ ದಂಪತಿ ಮಗಳು ಚೇತನಾ (12) ಮೃತಪಟ್ಟ ಬಾಲಕಿ.
ಭಾನುಬಾರ ಬೆಳಿಗ್ಗೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರತಿಷ್ಠಾನೆ ಮಾಡಿದ್ದ ಗಣಪತಿ ಬಳಿ ಆಟವಾಡುತ್ತಿದ್ದ ವೇಳೆ ಚೇತನಾಳಿಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷ ತಿಳಿಸಿದ್ದಾರೆ.
ಕೂಡಲೇ ಬಾಲಕಿ ಚೇತನಾಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯಲಹಂಕದ ಸ್ಪರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿಜಾವ ಐದು ಗಂಟೆಗೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.
ಮೃತ ಚೇತನಾ ಕೊನಘಟ್ಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…