ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.
ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಹಾಗೂ ಸಿಬ್ಬಂದಿಯವರ ನೇತೃತ್ವದಲ್ಲಿ ಕೆರೆಯಲ್ಲಿ ಸುಮಾರು 5 ಅಡಿ ಆಳದ ವಿಸರ್ಜನಾ ಹೊಂಡವನ್ನು ಸಿದ್ಧಪಡಿಸಲಾಗಿದೆ. ಗಣೇಶ ಮೂರ್ತಿಗಳನ್ನು ಹೊತ್ತು ತರುವ ಟ್ರ್ಯಾಕ್ಟರ್ ಹಾಗೂ ಇತರೆ ವಾಹನಗಳು ಕೆರೆ ಬಳಿಗೆ ಸುಗಮವಾಗಿ ತೆರಳಲು ಸುಮಾರು 30ರಿಂದ 40 ಲೋಡ್‌ಗಳಷ್ಟು ಮಣ್ಣನ್ನು ಹಾಕಿ ರಸ್ತೆ ಮಾರ್ಗವನ್ನು ಸಮತಟ್ಟುಗೊಳಿಸಲಾಗಿದೆ.
ರಾತ್ರಿ ವೇಳೆಯಲ್ಲೂ ಗಣೇಶ ವಿಸರ್ಜನೆಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಲೈಟಿಂಗ್ ವ್ಯವಸ್ಥೆ ಅಳವಡಿಸಲಾಗಿದೆ. ಅಲ್ಲದೆ, ಭದ್ರತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಲು ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ವಿಸರ್ಜನೆಗೆ ನೀರಿನ ಅಭಾವ ಎದುರಿಸುತ್ತಿರುವವರು ಗುಂಡಮಗೆರೆ ಕೆರೆಯಲ್ಲಿ ಸಿದ್ಧಪಡಿಸಿರುವ ಹೊಂಡದಲ್ಲಿ ಗಣೇಶ ಮೂರ್ತಿಗಳನ್ನು ಸುರಕ್ಷಿತವಾಗಿ ವಿಸರ್ಜನೆ ಮಾಡಿಕೊಳ್ಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಿ, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…