ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ: ಓರ್ವ ಬಾಲಕ‌ ಸಾವು: 8ಕ್ಕೂ ಹೆಚ್ಚು ಮಂದಿಗೆ ಗಾಯ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್‌ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು 8 ಮಂದಿಗೆ ಗಂಭೀರ ಗಾಯಳಾಗಿರುವ ಘಟನೆ ಇಂದು ಸಂಜೆ 5:45 ಗಂಟೆಗೆ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಸಂಭವಿಸಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತನುಷ್ ರಾವ್(15), ಎಂಬ ವಿದ್ಯಾರ್ಥಿ ಮೃತಪಟ್ಟಿರುತ್ತಾನೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ…

ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳಿಗೆ ಚಿಕಿತ್ಸೆ ಮುಂದುವರಿದಿದೆ…

ಇಂದು ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ವಿಸರ್ಜನೆಗೆಂದು ಟ್ರಾಕ್ಟರ್‌ನಲ್ಲಿ ಮೆರವಣಿಗೆ ಬರುವ ವೇಳೆ, ಬ್ಯಾನರ್‌ ಮೆರವಣಿಗೆ ಮಾಡಲು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿವೆ ಎನ್ನಲಾಗಿದೆ.

ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿದೆ. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದಲ್ಲಿಯೇ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಡಿವೈಎಸ್ಪಿ ರವಿ.ಪಿ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಪೊಲೀಸ್‌ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

18 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago