
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು 8 ಮಂದಿಗೆ ಗಂಭೀರ ಗಾಯಳಾಗಿರುವ ಘಟನೆ ಆ.29ರ ಶುಕ್ರವಾರ ಸಂಜೆ 5:45 ಗಂಟೆಗೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಸಂಭವಿಸಿತ್ತು.
ಇಂದು ಘಟನಾ ಸ್ಥಳ ಮುತ್ತೂರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.