ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣ: ಘಟನಾ ಸ್ಥಳ ಮುತ್ತೂರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ,‌ ಪರಿಶೀಲನೆ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್‌ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು 8 ಮಂದಿಗೆ ಗಂಭೀರ ಗಾಯಳಾಗಿರುವ ಘಟನೆ ಆ.29ರ ಶುಕ್ರವಾರ ಸಂಜೆ 5:45 ಗಂಟೆಗೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಸಂಭವಿಸಿತ್ತು.

ಇಂದು ಘಟನಾ ಸ್ಥಳ ಮುತ್ತೂರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ,‌ ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

18 minutes ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

10 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

14 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

23 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago